Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ಬೆಲೆಯಲ್ಲಿ ಭರ್ಜರಿ ಚೇತರಿಕೆ; 47 ಸಾವಿರ ಗಡಿ ದಾಟಿದ ಬೆಲೆ- ರೈತರಲ್ಲಿ ಮೊಗದಲ್ಲಿ ಖುಷಿ

arecanut

ದಾವಣಗೆರೆ

ದಾವಣಗೆರೆ: ಅಡಿಕೆ ಬೆಲೆಯಲ್ಲಿ ಭರ್ಜರಿ ಚೇತರಿಕೆ; 47 ಸಾವಿರ ಗಡಿ ದಾಟಿದ ಬೆಲೆ- ರೈತರಲ್ಲಿ ಮೊಗದಲ್ಲಿ ಖುಷಿ

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಧಾರಣೆಯಲ್ಲಿ ಅಲ್ಪ ಪ್ರಮಾಣದ ಏರಿಳಿಕೆ ನಡುವೆ ಮತ್ತೆ ಚೇತರಿಕೆ ಕಾಣುತ್ತಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ. ಜಿಲ್ಲೆಯ ಇವತ್ತಿನ(ಜ.23) ಮಾರುಕಟ್ಟೆ ಬೆಲೆ ಪ್ರತಿ ಕ್ವಿಂಟಾಲ್ ಗೆ ಗರಿಷ್ಠ 47,659 ರೂ.ಗೆ ಮಾರಾಟವಾಗಿದೆ. ಈ ಮೂಲಕ ಶನಿವಾರದ ಮಾರುಕಟ್ಟೆ ಗೆ ದ ಹೊಲಿಸಿ 750 ರೂಪಾಯಿಯಷ್ಟು ಚೇತರಿಕೆ ಕಂಡಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿಯಲ್ಲಿ ಉತ್ತಮ ರಾಶಿ ಪ್ರತಿ ಕ್ವಿಂಟಾಲ್ ಗೆ ದರ 47,659 ಗರಿಷ್ಠ ಬೆಲೆ ದಾಖಲಾಗಿದೆ. ನಿನ್ನೆ ಕ್ವಿಂಟಾಲ್ ಗೆ ಗರಿಷ್ಠ 46,899 ರೂ. ದಾಖಲಾಗಿತ್ತು. ಈ ಮೂಲಕ ಬೆಲೆಯಲ್ಲಿ ಇವತ್ತು 750 ರೂಪಾಯಷ್ಟು ಹೆಚ್ಚಳವಾಗಿದೆ. 2nd ಬೆಟ್ಟೆ ಅಡಿಕೆ ಗರಿಷ್ಠ 34,789 ಬೆಲೆಗೆ ಮಾರಾಟವಾದೆ.

ಇವತ್ತಿನ (ಜ.23) ಉತ್ತಮ ರಾಶಿಯ ಕನಿಷ್ಠ ಬೆಲೆ‌ 45,912 ಆಗಿದ್ದು, ಗರಿಷ್ಠ ಬೆಲೆ 47,659 ಹಾಗೂ ಸರಾಸರಿ ಬೆಲೆ 47,0005 ಆಗಿದೆ. ಇನ್ನೂ 2nd ಬೆಟ್ಟೆ ಅಡಿಕೆ ಬೆಲೆ ಕನಿಷ್ಠ 34,779 ಗರಿಷ್ಠ ಬೆಲೆ34,789 ಹಾಗೂ ಸರಾಸರಿ ಬೆಲೆ 36,629 ಆಗಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಜಗಳೂರು, ಹರಿಹರ, ನ್ಯಾಮತಿ, ಮಾಯಕೊಂಡ ಸೇರಿದಂತೆ ಎಲ್ಲ ಕಡೆ ಅಧಿಕ ಪ್ರಮಾಣದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಅಡಿಕೆ ಬೆಲೆ ಕುಸಿತದಿಂದ ರೈತರಲ್ಲಿ ಆತಂಕ ಉಂಟು ಮಾಡಿತ್ತು. ಇದೀಗ ದಿನದಿಂದ ದಿನಕ್ಕೆ ಸ್ವಲ್ಪ ಚೇತರಿಕೆ ಕಂಡಿದ್ದರೂ ನೂರು, ಇನ್ನೂರು ರೂಪಾಯಿ ಏರಿಳಿತ ಕಾಣುತ್ತಿದೆ. ಜನವರಿ ತಿಂಗಳಲ್ಲಿ ಏರಿಕೆ ಕಾಣುತ್ತಿರುವುದು ರೈತರ ಮೊಗದಲ್ಲಿ ಸಂತಸ ಮೂಡುವಂತೆ ಮಾಡಿದೆ. ಮುಂದಿನಗಳಲ್ಲಿ ಅಡಿಕೆ ಧಾರಣೆ ಮತ್ತಷ್ಟು ಚೇತರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top