ದಾವಣಗೆರೆ: ನಗರದ ಬಾಪೂಜಿ ಸಂಸ್ಥೆಯ ಮುಖ್ಯಸ್ಥರು, ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ರಾಷ್ಟ್ರೀಯ ಅಧ್ಯಕ್ಷರು, ಹಾಲಿ ಶಾಸಕರು ಹಾಗೂ ಮಾಜಿ ಸಚಿವರಾದ ಡಾ. ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆ ಗೌರವಾರ್ಥವಾಗಿ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಡಿ.15ರಂದು ದಾವಣಗೆರೆ ನಗರದ ವ್ಯಾಪ್ತಿಯ ಹಾಗೂ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈ ರಜೆಯನ್ನು ಮುಂದಿನ ಶನಿವಾರ ಡಿ 27ರಂದು ಪೂರ್ತಿ ದಿನ ಶಾಲೆ ನಡೆಸಿ ಸರಿದೂಗಿಸಲು ಡಿಡಿಪಿಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿ, ಸ್ನಾತಕೋತ್ತರ ಕೇಂದ್ರ ಜಿ.ಆರ್.ಹಳ್ಳಿ, ಚಿತ್ರದುರ್ಗ ಹಾಗೂ ಎಲ್ಲಾ ಘಟಕ ಕಾಲೇಜುಗಳಿಗೆ ಡಿ. 15 ರಂದು ರಜೆ ಘೋಷಿಸಲಾಗಿದೆ ಎಂದು ದಾವಣಗೆರೆ ವಿವಿ ಕುಲಸಚಿವ ಎಸ್.ಎ.ಘಂಟಿ ತಿಳಿಸಿದ್ದಾರೆ.
ಪರೀಕ್ಷೆಗಳು ಮುಂದೂಡಿಕೆ: ಡಿ.15 ರಂದು ನಡೆಯಬೇಕಿದ್ದ ವಿವಿಯ ಎಲ್ಲ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಬದಲಿ ದಿನಾಂಕ ನಂತರದಲ್ಲಿ ತಿಳಿಸಲಾಗುವುದು ಎಂದು ಕುಲಸಚಿವ (ಪರೀಕ್ಷಾಂಗ) ಪ್ರೊ.ಸಿ.ಕೆ.ರಮೇಶ ತಿಳಿಸಿದ್ದಾರೆ.



