ದಾವಣಗೆರೆ: ಪ್ರವಾಸೋದ್ಯಮ ಇಲಾಖೆ( tourism department) ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು (Food Craft Institute) ಮತ್ತು ಹೋಟೆಲ್ ನಿರ್ವಹಣಾ ಸಂಸ್ಥೆ ಬೆಂಗಳೂರು (Institute Of Hotel Management) ಸಹಯೋಗದಲ್ಲಿ 454 ಅಭ್ಯರ್ಥಿಗಳಿಗೆ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿ (Skill Development Training) ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇನ್ನೂ ಮೂರು ದಿನ ರಾಜ್ಯದ ವಿವಿಧ ಕಡೆ ಮಳೆ ಮುನ್ಸೂಚನೆ
ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ತರಬೇತಿ ನೀಲಾಗುವುದು. ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ: ಅಡಿಕೆ ದರದಲ್ಲಿ ಮತ್ತಷ್ಟು ಏರಿಕೆ – ಮಾ.24ರ ದರ ಎಷ್ಟಿದೆ..?
ಮಲ್ಟಿ ಕ್ಯೂಸಿನ್ ಕುಕ್ ಮತ್ತು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಜಿಲ್ಲೆಯ ಅಭ್ಯರ್ಥಿಗಳು ಮಾ.25 ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 3 ರೊಳಗೆ ನೇರವಾಗಿ ಇಲಾಖೆಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ ತಿಳಿಸಿದ್ದಾರೆ.