ದಾವಣಗೆರೆ: ಸೆ.13ರಂದು ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕಾದಾಲತ್ ಜರುಗಲಿದ್ದು, ಸಾರ್ವಜನಿಕರಿಗೆ ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು. ಆದೇ ರೀತಿ ಸಂಚಾರಿ ನಿಯಮಗಳ ಉಲ್ಲಂಘನೆ ದಂಡ ಮೊತ್ತ ಪಾವತಿಸಲು ಶೇ 50% ರಿಯಾಯಿತಿ ಸೆಪ್ಟೆಂಬರ್ 13 ರಂದು ಅಂತ್ಯಗೊಳ್ಳಲಿದೆ.
ಇದರ ಸದುಪಯೋಗ ಮಾಡಿಕೊಳ್ಳಲು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ ಮ.ಕರೆಣ್ಣವರ್ ತಿಳಿಸಿದ್ದಾರೆ.



