ದಾವಣಗೆರೆ: ಶೇ.50ರಷ್ಟು ರಿಯಾಯಿತಿಯಲ್ಲಿ ಸಂಚಾರಿ ನಿಮಯ ಉಲ್ಲಂಘನೆ ದಂಡ ಪಾವತಿಸುವ ಅವಧಿಯನ್ನು ಮಾ. 4 ರಿಂದ ಅನ್ವಯವಾಗುವಂತೆ ಮತ್ತೆ 15 ದಿನಗಳವರೆಗೆ ಅವಧಿ ವಿಸ್ತರಿಸಲಾಗಿದೆ.
ಕಳೆದ ತಿಂಗಳು ರಾಜ್ಯ ಸರ್ಕಾರ ಶೇ.50ರಷ್ಟು ರಿಯಾಯಿತಿಯೊಂದಿಗೆ ಸಂಚಾರ ನಿಯಮ ಉಲ್ಲಂಘನೆ ಬಾಕಿ ದಂಡ ಪಾವತಿಸಲು ಅವಕಾಶ ಕಲ್ಪಿಸಿತ್ತು.ರಾಜ್ಯದಲ್ಲಿ ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ ಇದೀನ ಮಾ.04 ರಿಂದ ಅನ್ವಯ ಆಗುವಂತೆ 15 ದಿನ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪೋಲಿಸ್ ಠಾಣೆಯನ್ನು ಸಂಪರ್ಕಿಸಬಹುದು ಹಾಗೂ ವಾಹನ ಸವಾರರು ಈ ಅವಕಾಶದ ಸದುಪಯೋಗ ಪಡೆಯಬಹುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



