ದಾವಣಗೆರೆ: ವಂದೇ ಭಾರತ್ ರೈಲಿನಲ್ಲಿ ಬೆಂಕಿ ಅವಘಡ; ತಪ್ಪಿದ ದೊಡ್ಡ ದುರಂತ

ದಾವಣಗೆರೆ: ದಾವಣಗೆರೆಯಲ್ಲಿ ವಂದೇ ಭಾರತ್ (Vande Bharat Express) ರೈಲಿಬಲ್ಲಿ ಬೆಂಕಿ ಅವಘಡ ಉಂಟಾಗಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಆಗಿಲ್ಲ.

ಧಾರವಾಡದಿಂದ ಬೆಂಗಳೂರಿಗೆ ಹೋಗುತ್ತಿದ್ದ ವಂದೇ ಭಾರತ್‌ ರೈಲಿನಲ್ಲಿ ದಾವಣಗೆರೆ ಬಳಿ ಟ್ರೈನ್‌ನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಗೇಟ್‌ ಮ್ಯಾನ್‌ ರೈಲ್ವೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಇದರಿಂದ ದೊಡ್ಡ ಅನಾಹುತ ಆಗುವುದು ತಪ್ಪಿದೆ.

ಬೆಂಕಿ ನಂದಿಸಿದ ಸಿಬ್ಬಂದಿ

ಗೇಟ್‌ ಮ್ಯಾನ್‌ ರೈಲ್ವೇ ಅಧಿಕಾರಿಗಳಿಗೆ ಮಾಹಿತಿ ನೀಡಿದ ತಕ್ಷಣ ರೈಲನ್ನು ದಾವಣಗೆರೆಯಲ್ಲಿ ನಿಲ್ಲಿಸಿದ್ದಾರೆ. ನಂತರ ರೈಲ್ವೇ ಪೊಲೀಸರು ಹಾಗೂ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ವಂದೇ ಭಾರತ್‌ ರೈಲಿನಲ್ಲಿದ್ದ ಪ್ರಯಾಣಿಕರನ್ನು ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಗಳೂರಿಗೆ ಕಳುಹಿಸಲಾಗಿದೆ.

 

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts