Connect with us

Dvgsuddi Kannada | online news portal | Kannada news online

ದಾವಣಗೆರೆ: ಯಾವುದೇ ಕ್ಷಣದಲ್ಲಿ ನದಿಗೆ ನೀರು; ತುಂಗಾಭದ್ರಾ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಿದ ಡಿಸಿ

ದಾವಣಗೆರೆ

ದಾವಣಗೆರೆ: ಯಾವುದೇ ಕ್ಷಣದಲ್ಲಿ ನದಿಗೆ ನೀರು; ತುಂಗಾಭದ್ರಾ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಿದ ಡಿಸಿ

ದಾವಣಗೆರೆ: ತುಂಗಭದ್ರಾ ನದಿಯಲ್ಲಿ 75 ಸಾವಿರ ಕ್ಯೂಸೆಕ್ ನೀರು ಹರಿಯುತ್ತಿದ್ದು ಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇದೆ. ಯಾವುದೇ ಕ್ಷಣದಲ್ಲಿ ಜಲಾಶಯದಿಂದ ನದಿಗೆ ನೀರು ಬಿಡಬಹುದಾಗಿದ್ದು, ನೀರಿನ ಪ್ರಮಾಣ ಏಕಾಏಕಿ ಏರಿಕೆಯಾಗಲಿದೆ‌. ಹೀಗಾಗಿ ನದಿ ಪಾತ್ರದಲ್ಲಿನ ಜನರು ಎಚ್ಚರಿಕೆಯಿಂದಿರಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ತುಂಗಾ ಜಲಾಶಯದಿಂದ 74,105 ಕ್ಯೂಸೆಕ್ ನೀರು ತುಂಗಭದ್ರಾ ನದಿಯಲ್ಲಿ ಹರಿಯುತ್ತಿದೆ. ಭದ್ರಾ ಜಲಾಶಯ ಭರ್ತಿಯಾಗಲು 5 ಅಡಿ ಬಾಕಿ ಇದ್ದು , 35557 ಕ್ಯೂಸೆಕ್ ಒಳಹರಿವು ಇದೆ. ಮತ್ತು ಮಲೆನಾಡಿನಲ್ಲಿ ಉತ್ತಮ ಮಳೆ ಬರುತ್ತಿರುವುದರಿಂದ ನೀರಿನ ಒಳಹರಿವು ಹೆಚ್ಚಲಿರುವುದರಿಂದ ಭದ್ರಾ ಜಲಾಶಯ ಭರ್ತಿಯಾಗಿ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡಬಹುದಾಗಿದ್ದು ನದಿಪಾತ್ರದಲ್ಲಿನ ಜನರು ತಮ್ಮ ಆಸ್ತಿ, ಜಾನುವಾರುಗಳನ್ನು ರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.

ಭದ್ರಾ ಡ್ಯಾಂ ತುಂಬಿದ ನಂತರ ನದಿಯಲ್ಲಿನ ನೀರನ ಪ್ರಮಾಣ ಗಣನೀಯವಾಗಿ ಹೆಚ್ವಿದೆ. ಇದರಿಂದ ನದಿಯಲ್ಲಿನ ನೀರಿನ ಮಟ್ಟ ಅಪಾಯ ಮಟ್ಟದಲ್ಲಿರುತ್ತದೆ. ಇದರಿಂದ ಹೊನ್ನಾಳಿ, ನ್ಯಾಮತಿ, ಹರಿಹರ ತಾಲ್ಲೂಕುಗಳಲ್ಲಿನ ನದಿಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಹೊನ್ನಾಳಿ ಪಟ್ಟಣದ ನದಿ ತೀರದ ಬಾಲರಾಜ್‌ಘಾಟ್ ಪ್ರದೇಶದ 11 ಕುಟುಂಬದ 64 ಜನರನ್ನು ಅಂಬೇಡ್ಕರ್ ಭವನದಲ್ಲಿನ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.

ನದಿ ಪಾತ್ರದಲ್ಲಿನ ಎಲ್ಲಾ ಗ್ರಾಮಗಳಲ್ಲಿ ಜನ, ಜಾನುವಾರುಗಳನ್ನು ನದಿಗೆ ಇಳಿಯದಂತೆ ಎಚ್ಚರ ವಹಿಸಲು ಜಾಗೃತಿ ಮೂಡಿಸಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಗ್ರಾಮ ಮಟ್ಟದ ಟಾಸ್ಕ್ಪೋರ್ಸ್ ಸಮಿತಿ ರಚಿಸಲಾಗಿದೆ. ಮತ್ತು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ತುರ್ತು ನಿಗಾ ಘಟಕಗಳನ್ನು ಸನ್ನದ್ದವಾಗಿಡಲಾಗಿದೆ. ಮತ್ತು ಅಧಿಕಾರಿಗಳು ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಸಹಾಯವಾಣಿ ಸ್ಥಾಪನೆ; ಜಿಲ್ಲಾಧಿಕಾರಿಗಳ ಕಚೇರಿ 08192-234034, 1077, ಎಸ್‌ಡಿಆರ್‌ಎಫ್ ಘಟಕ, ದೇವರಬೆಳೆಕೆರೆ 7411308591, ದಾವಣಗೆರೆ ಅಗ್ನಿಶಾಮಕ ಇಲಾಖೆ 08192-258101, 112, ದಾವಣಗೆರೆ ಮಹಾನಗರ ಪಾಲಿಕೆ 08192-234444, 8277234444, ದಾವಣಗೆರೆ ತಾ; ಕಚೇರಿ 9036396101, ಹರಿಹರ 08192-272959, ಜಗಳೂರು 08196-227242, ಹೊನ್ನಾಳಿ 08188-252108, ನ್ಯಾಮತಿ 8073951245, ಚನ್ನಗಿರಿ 7892481962 ದೂರವಾಣಿ, ಮೊಬೈಲ್ ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top