Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾ. 6 ರಂದು ಉದ್ಯೋಗ ಮೇಳ

ಪ್ರಮುಖ ಸುದ್ದಿ

ದಾವಣಗೆರೆ: ಮಾ. 6 ರಂದು ಉದ್ಯೋಗ ಮೇಳ

ದಾವಣಗೆರೆ: ಜಿಲ್ಲಾ ಉದ್ಯೋಗ ಮತ್ತು ವಿನಿಮಯ ಕೇಂದ್ರ ದಾವಣಗೆರೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾಳಿ ಇವರ ಸಂಯುಕ್ತಾಶ್ರಯದಲ್ಲಿ ಮಾ. 6 ರಂದು ಬೆಳಿಗ್ಗೆ 10 ಗಂಟೆಗೆ ಹೊನ್ನಾಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಟಿ.ಬಿ. ಸರ್ಕಲ್ ಹತ್ತಿರ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಎ, ಬಿ.ಕಾಂ, ಬಿಎಸ್ಸಿ, ಬಿಬಿಎ/ಬಿಬಿಎಂ, ಬಿಸಿಎ ಹಾಗೂ ಸ್ನಾತಕೋತ್ತರ ಪದವಿ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತ ಅಭ್ಯರ್ಥಿಗಳು ಮಾ. 6 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಕನಿಷ್ಠ 10 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ ಭಾಗವಹಿಸುವುದು ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ 08192-259446, 6361550016, 9743636369, 7406323294 ಗೆ ಸಂಪರ್ಕಿಸಿ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಗಿರೀಶ್ ಕೆ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top