ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಮಾದರಿ ವೃತ್ತಿ ಕೇಂದ್ರದ ಯೋಜನೆ ಅಡಿಯಲ್ಲಿ “ಆಜಾದಿ ಕಾ ಅಮೃತ ಮಹೋತ್ಸವ”ದ ಪ್ರಯುಕ್ತ ಮಾ.11 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ, ಡಿಪ್ಲೊಮಾ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ/ಬಿ.ಬಿ.ಎಂ, ಬಿ.ಸಿ.ಎ ಹಾಗೂ ಸ್ನಾತಕೋತ್ತರ ಪದವಿ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತ ಅಭ್ಯರ್ಥಿಗಳು ಮಾ.11 ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಕನಿಷ್ಠ 05 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹಾಜರಾಗುವ ಅಭ್ಯರ್ಥಿಗಳು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ 08192 259446, 9916661900, 7406323294 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಗಿರೀಶ ಕೆ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



