ದಾವಣಗೆರೆ: ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ವಿವಿಧ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಡಿಸೆಂಬರ್ 15 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ 30ಕ್ಕೂ ಹೆಚ್ಚು ಕಂಪನಿಗಳು ಮತ್ತು ಒಂದು ಸಾವಿರಕ್ಕೂ ಅಧಿಕ ಉದ್ಯೋಗಾಂಕ್ಷಿಗಳು ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ttps://tinyurl.com/3fvwnawt ಅಥವಾ ಮೊ.7892956667, 8095774802, 8971749636 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.



