Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಉದ್ಯೋಗ ಮೇಳ ಇಂದು

images 45

ದಾವಣಗೆರೆ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಉದ್ಯೋಗ ಮೇಳ ಇಂದು

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಇಂದು (ಜುಲೈ 21) ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಕೊಠಡಿ ಸಂ. 51 ರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಹಲವು ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಎಸ್ಸಿ(ನರ್ಸಿಂಗ್) ಎ.ಎನ್.ಎಮ್, ಜಿ.ಎನ್.ಎಮ್ ಹಾಗೂ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ ಅಭ್ಯರ್ಥಿಗಳು ನಿಗಧಿತ ಸಮಯಕ್ಕೆ ಕನಿಷ್ಠ 10 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್‍ನೊಂದಿಗೆ ಜಿಲ್ಲಾ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ. ಸಂ. 08192-259446, ಮೊ.6361550016 ಗೆ ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ಡಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top