Connect with us

Dvgsuddi Kannada | online news portal | Kannada news online

ದಾವಣಗೆರೆ: ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಜು.16ರಂದು ಉದ್ಯೋಗ ಮೇಳ

ದಾವಣಗೆರೆ

ದಾವಣಗೆರೆ: ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಜು.16ರಂದು ಉದ್ಯೋಗ ಮೇಳ

ದಾವಣಗೆರೆ: ಮಾದರಿ ವೃತ್ತಿ ಕೇಂದ್ರ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಎಸ್.ಜೆ.ವಿ.ಪಿ ಕಾಲೇಜು ಸಂಯುಕ್ತಾಶ್ರಯದಲ್ಲಿ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜು.16 ರಂದು ಬೆಳಗ್ಗೆ 10 ಗಂಟೆಗೆ, ಎಸ್.ಜೆ.ವಿ.ಪಿ. ಕಾಲೇಜು, ಹರಿಹರದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ, ಡಿಪ್ಲೊಮಾ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ/ಬಿ.ಬಿ.ಎಂ, ಬಿ.ಸಿ.ಎ ಬಿಇ(ಇಇಇ)/ಬಿ.ಟೆಕ್ ಹಾಗೂ ಸ್ನಾತಕೋತ್ತರ ಪದವಿ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಜು.16ರ ಶನಿವಾರ ರಂದು ಬೆಳಗ್ಗೆ 10 ಗಂಟೆಗೆ ಕನಿಷ್ಠ 10 ಸೆಟ್ ಬಯೋಡಾಟಾ, ಆಧಾರ್ ಕಾರ್ಡ್ ನೊಂದಿಗೆ ಎಸ್.ಜೆ.ವಿ.ಪಿ. ಕಾಲೇಜು, ಹರಿಹರ ಇಲ್ಲ್ಲಿ ಭಾಗವಹಿಸಿ ಈ ಉದ್ಯೋಗ ಮೇಳದÀ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 08192-259446, 6361550016, 7406323294 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಗಿರೀಶ ಕೆ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top