ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ 12ನೇ ಘಟಿಕೋತ್ಸವವು ಏಪ್ರಿಲ್ 2 ರಂದು ಬೆಳಿಗ್ಗೆ 11.30ಕ್ಕೆ ತೋಳಹುಣಸೆಯಲ್ಲಿನ ಜ್ಞಾನಸೌಧ ಶಿವಗಂಗೋತ್ರಿ ಆವರಣದಲ್ಲಿ ನಡೆಯಲಿದೆ.
ರಾಜ್ಯದ ಜನತೆ ಬೆಲೆ ಏರಿಕೆ ಬರೆ; ನಂದಿನಿ ಹಾಲಿನ ದರ 4 ರೂ. ಹೆಚ್ಚಳ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲರು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ವಹಿಸುವರು. ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾನಿಲಯದ ಸಮಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ ಉಪಸ್ಥಿತರಿರುವರು. ಭಾರತೀಯ ಜೀವರಸಾಯನಶಾಸ್ತ್ರಜ್ಞ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ ಮಾಜಿ ನಿರ್ದೇಶಕರಾದ ಪದ್ಮಭೂಷಣ ಪ್ರೋ.ಪಿ.ಬಲರಾಮ ಮುಖ್ಯ ಅತಿಥಿಗಳಾಗಿ ಘಟಿಕೋತ್ಸವ ಭಾಷಣ ಮಾಡುವರು.
ಕಾರ್ಯಕ್ರಮದಲ್ಲಿ ದಾವಣಗೆರೆ ವಿ.ವಿ. ಕುಲಪತಿ ಪ್ರೋ.ಬಿ.ಡಿ.ಕುಂಬಾರ, ಕುಲಸಚಿವರಾದ ಪ್ರೋ. ರಮೇಶ.ಸಿ.ಕೆ, ಕುಲಸಚಿವರು, ಪ್ರೋ.ಆರ್.ಶಶಿಧರ (ಪ್ರಭಾರ), ಕುಲಪತಿಗಳು, ಕುಲಸಚಿವರು, ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರುಗಳು ಭಾಗವಹಿಸುವರು.



