ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯ ಆಡಳಿತ ವಿಭಾಗದ ಕುಲಸಚಿವೆಯಾಗಿ ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿ ಸರೋಜಾ ಬಿ.ಬಿ. ಅವರನ್ನು ನೇಮಕ ಮಾಡಿ ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.
2021 ರಲ್ಲಿ ದಾವಿವಿ ಕುಲಸಚಿವೆಯಾಗಿ ನೇಮಕವಾಗಿದ್ದ ಸೂಕ್ಷ್ಮ ಜೀವಾಣು ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಡಾ. ಗಾಯತ್ರಿ ದೇವರಾಜ್ ಅವರ ಸ್ಥಾನಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ಸರೋಜಾ ಅವರನ್ನು ನೇಮಿಸಲಾಗಿದೆ.



