ದಾವಣಗೆರೆ: ಕುಸ್ತಿ, ಕಬಡ್ಡಿ, ಖೋ-ಖೋ, ವೇಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಮತ್ತು ವಾಲಿಬಾಲ್ ಅಭ್ಯಾಸಕ್ಕಾಗಿ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ ತಿಳಿಸಿದರು.
ಕ್ರೀಡಾ ಕೌಶಲ್ಯಗಳನ್ನು ಬೆಳೆಸಲು ತಜ್ಞರಿಂದ ತರಬೇತಿಗೆ ವ್ಯವಸ್ಥೆ ಮಾಡಲು ಪ್ರಸ್ತಾಪಿಸಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದಲ್ಲದೆ ಕಬಡ್ಡಿ ಮತ್ತು ಕುಸ್ತಿಪಟುಗಳಿಗೆ ಮ್ಯಾಟ್ ಮೇಲೆ ಅಭ್ಯಾಸ ಮಾಡುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದ್ದಾರೆ.



