ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಿರುವ ಪಿಹೆಚ್‍ಡಿ, ಪಿಡಿಎಫ್, ಡಿಎಸ್‍ಸಿ, ಡಿ.ಲಿಟ್ ಸಂಶೋಧನೆಗೆ ಅರ್ಜಿ ಆಹ್ವಾನಿಸಲಾಗಿದೆ.
ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಮೇ.07 ರಂದು ಬೆಳಿಗ್ಗೆ 10.30 ರಿಂದ ಸಂಜೆ 5.30 ರೊಳಗೆ ಅರ್ಜಿ ಭರ್ತಿ ಮಾಡಿ ಸಂಬಂಧಪಟ್ಟ ವಿಭಾಗಗಳಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ www.davangereuniversity.ac.in ವೆಬ್‍ಸೈಟ್ ಸಂಪರ್ಕಿಸಬಹುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವೆ ಪ್ರೊ. ಅನಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



