ದಾವಣಗೆರೆ: ಏಪ್ರಿಲ್ 2ರಂದು ದಾವಣಗೆರೆ ವಿಶ್ವವಿದ್ಯಾನಿಲಯದ (davangere university) 12 ನೇ ಘಟಿಕೋತ್ಸವ ನಡೆಯಲಿದ್ದು, ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಹಾಗೂ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಎಸ್.ಆರ್. ನಿರಂಜನ ಅವರಿಗೆ ಗೌರವ ಡಾಕ್ಟರೇಟ್ ಅನ್ನು ವಿಶ್ವವಿದ್ಯಾಲಯದ ಕುಲಾಧಿಪತಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.
ಪ್ರತಿನಿತ್ಯ 8 ಸಾವಿರ ಕ್ಯೂಸೆಕ್ ನಂತೆ ಮೂರು ದಿನ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು
ಏಪ್ರಿಲ್ 2ರಂದು ದಾವಣಗೆರೆ ವಿಶ್ವವಿದ್ಯಾನಿಲಯದ 12 ನೇ ಘಟಿಕೋತ್ಸವ ನಡೆಯಲಿದ್ದು, 14,048 ಸ್ನಾತಕ ಮತ್ತು ಸ್ನಾತಕೋತ್ತರ ಪದವಿ, 46 ವಿದ್ಯಾರ್ಥಿಗಳು 87 ಚಿನ್ನದ ಪದಕ ಹಾಗೂ 57 ಪಿಎಚ್.ಡಿ. ಪದವಿಯನ್ನು ಪಡೆಯಲಿದ್ದಾರೆ.
ದಾವಣಗೆರೆ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕುಲಪತಿ ಪ್ರೊ.ಬಿ.ಡಿ.ಕುಂಬಾರ, ಈ ಸಲದಸ ಘಟಿಕೋತ್ಸವದಲ್ಲಿ 23 ವಿಭಾಗಗಳಲ್ಲಿ 21 ಮಹಿಳೆಯರು ಮತ್ತು 36 ಪುರುಷರು ಸೇರಿ ಒಟ್ಟು 57 ಜನರು ಪಿಎಚ್.ಡಿ. ಪದವಿ ಪಡೆಯಲಿದ್ದಾರೆ. ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯಲ್ಲಿ 87 ಸ್ವರ್ಣ ಪದಕಗಳಿದ್ದು, 35 ವಿದ್ಯಾರ್ಥಿನಿಯರು ಮತ್ತು 11 ಪುರುಷರು ಸೇರಿ ಒಟ್ಟು 46 ವಿದ್ಯಾರ್ಥಿಗಳು ಪದಕಗಳನ್ನು ಹಂಚಿಕೊಂಡಿದ್ದಾರೆ ಎಂದರು.
ಈ ಬಾರಿಯೂ ವಿದ್ಯಾರ್ಥಿನಿಯರೇ ಚಿನ್ನದ ಗಳಿಕೆಯಲ್ಲಿ ಮೇಲುಗೈ ಸಾಧಿಸಿದ್ದಾರೆ. ಇದರಲ್ಲಿ ಸ್ನಾತಕ ಪದವಿಯ 9 ಮತ್ತು ಸ್ನಾತಕೋತ್ತರ ಪದವಿಯ 26 ವಿದ್ಯಾರ್ಥಿನಿಯರು ಈ ಸಾಧನೆ ಮಾಡಿದ್ದಾರೆ. ಕಳೆದ ಶೈಕ್ಷಣಿಕ ವರ್ಷದ ಸ್ನಾತಕ ಪದವಿಯ ವಿವಿಧ ಕೋರ್ಸ್ ಗಳಲ್ಲಿ ಒಟ್ಟು 12,129 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದಾರೆ. ಅವರಲ್ಲಿ 7,645 ಮಹಿಳೆಯರು ಮತ್ತು 4,448 ಪುರುಷರು ಪದವೀಧರರಾಗಲಿದ್ದಾರೆ. ಸ್ನಾತಕ ಪದವಿಯ ಫಲಿತಾಂಶ ಶೇ 61.14 ರಷ್ಟಾಗಿದೆ ಎಂದು ತಿಳಿಸಿದರು.
ಇನ್ನು ವಿಶ್ವವಿದ್ಯಾನಿಲಯ 24 ಕೋರ್ಸ್ ಗಳಲ್ಲಿ ಒಟ್ಟು 1,919 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆಯಲು ಅರ್ಹರಾಗಿದ್ದಾರೆ. ಇವರಲ್ಲಿ 1,192 ಮಹಿಳೆಯರು ಮತ್ತು 727 ಪುರುಷ ವಿದ್ಯಾರ್ಥಿಗಳು ಸೇರಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ ಶೇ 96.14ರಷ್ಟು ಫಲಿತಾಂಶ ಬಂದಿದೆ.
ಪದವಿ ಪ್ರದಾನ ; ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಏಪ್ರಿಲ್ 2ರಂದು ವಿವಿಯಲ್ಲಿ ನಡೆಯುವ 12ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯಪಾಲರು ಪದವಿ ಪ್ರದಾನ ಜೊತೆಗೆ, ರ‍್ಯಾಂಕ್ ವಿಜೇತರಿಗೆ 87 ಚಿನ್ನದ ಪದಕ ನೀಡುವರು. 57 ಜನರಿಗೆ ಪಿಎಚ್.ಡಿ. ಪದವಿ ಪ್ರಮಾಣಪತ್ರ ಪ್ರದಾನ ಮಾಡಲಿದ್ದಾರೆ. ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಒಟ್ಟು 14,048 ವಿದ್ಯಾರ್ಥಿಗಳಿಗೆ ಪದವಿ ಪ್ರದಾನವಾಗಲಿದೆ ಎಂದರು.
ವಿಶ್ವವಿದ್ಯಾನಿಲಯದ ಗೌರವಾನ್ವಿತ ಕುಲಾಧಿಪತಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಉಪಸ್ಥಿತರಿರುವರು. ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರು ಎರಡರಿಂದ ಹತ್ತನೇ ರ‍್ಯಾಂಕ್ ವಿಜೇತರಿಗೆ ಪ್ರಮಾಣಪತ್ರ ವಿತರಿಸುವರು. ಭಾರತೀಯ ವಿಜ್ಞಾನ ಸಂಸ್ಥೆ ಮಾಜಿ ನಿರ್ದೇಶಕ, ಪದ್ಮಭೂಷಣ ಪ್ರೊ.ಪಿ. ಬಲರಾಮ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ.ಬಿ.ಡಿ.ಕುಂಬಾರ ತಿಳಿಸಿದರು.ಈ ಸಂದರ್ಭದಲ್ಲಿ ಕುಲಸಚಿವ ಪ್ರೊ.ಆರ್.ಶಶಿಧರ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ ಉಪಸ್ಥಿತರಿದ್ದರು.