ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ 13ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಸ್ನಾತಕೋತ್ತರ ಕೇಂದ್ರ ಜ್ಞಾನಗಂಗೋತ್ರಿ ಕ್ಯಾಂಪಸ್, ಜಿ.ಆರ್. ಹಳ್ಳಿ ಚಿತ್ರದುರ್ಗ ಇಲ್ಲಿನ ಪುರುಷರ ವಸತಿ ನಿಲಯದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ಅಕ್ಟೋಬರ್ 13 ರ ಮಧ್ಯಾಹ್ನ 12.30ಕ್ಕೆ ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಆವರಣದಲ್ಲಿ ಏರ್ಪಡಿಸಲಾಗಿದೆ.
ಕೇಂದ್ರದ ರಾಸಾಯನಿಕ ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಭಗವಂತ ಖೂಬಾ ಅವರು ಉದ್ಘಾಟಿಸುವರು. ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಶರಣಪ್ಪ.ವಿ.ಹಲಸೆ ಅಧ್ಯಕ್ಷತೆ ವಹಿಸುವರು.ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿ, ಮಹಾನಗರ ಪಾಲಿಕೆ ಮಹಾಪೌರ ಎಸ್.ಟಿ.ವೀರೇಶ್ ಸೇರಿದಂತೆ ಗಣ್ಯ ವ್ಯಕ್ತಿಗಳು ಉಪಸ್ಥಿತರಿರುವರು.



