ದಾವಣಗೆರೆ: ಸರ್ಕಾರ 15 ಸಾವಿರ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿರುವ ಹಿನ್ನೆಲೆ ಅಂತಿಮ ವರ್ಷದ ಬಿಇಡಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲು ಬಿಇಡಿ ಮೌಲ್ಯಮಾಪನ ಪೂರ್ಣಗೊಳಿಸಿದ ಎರಡು ಗಂಟೆಯಲ್ಲಿಯೇ ದಾವಣಗೆರೆ ವಿಶ್ವವಿದ್ಯಾಲಯ ಫಲಿತಾಂಶ ಪ್ರಕಟಿಸಿದೆ.
ರಾಜ್ಯದ 6ರಿಂದ 8 ತರಗತಿವರೆಗಿನ ಪ್ರಾಥಮಿಕ ಶಾಲೆಯ 15 ಸಾವಿರ ಪದವೀಧರ ಶಿಕ್ಷಕರ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರವು ಮಾರ್ಚ್ 21ರಂದು ಅಧಿಸೂಚನೆ ಹೊರಡಿಸಿತ್ತು. ಏಪ್ರಿಲ್ 22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.ಹೀಗಾಗಿ ಬಿ.ಇಡಿ ನಾಲ್ಕನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳು ಮಾರ್ಚ್ 23ರಂದು ಕೊನೆಯ ಪರೀಕ್ಷೆ ಬರೆದಿದ್ದರು. ಫಲಿತಾಂಶ ಹೊರಬರುವುದು ವಿಳಂಬವಾದರೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅವಕಾಶ ಕೈತಪ್ಪಬಾರದು ಎಂದು ದಾಣಗೆರೆ ವಿ.ವಿ. ಪರೀಕ್ಷಾಂಗ ವಿಭಾಗವು ಏಪ್ರಿಲ್ 4 ರಿಂದ ಮೂರು ಮೌಲ್ಯಮಾಪನವನ್ನು ಪೂರಗಣಗೊಳಿಸಿ ಫಲಿತಾಂಶ ಪ್ರಕಟಿಸಿದೆ
ವಿ.ವಿ. ಯ ಒಟ್ಟು 34 ಬಿ.ಇಡಿ ಕಾಲೇಜುಗಳಿಂದ ನಾಲ್ಕನೇ ಸೆಮಿಸ್ಟರ್ ಪರೀಕ್ಷೆಗೆ 2,282 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕಡಿದ್ದು, ಇಧರಲ್ಲಿ 2,281 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗಿದೆ. ಉತ್ತೀರ್ಣರಾಗಿರುವ 2,240 (ಶೇ 98.2) ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆದುಕೊಂಡಿದ್ದಾರೆ. 41 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. ಮೇ 21 ಮತ್ತು 22ರಂದು ಸಿಇಟಿ ನಡೆಯಲಿದೆ.



