Connect with us

Dvgsuddi Kannada | online news portal | Kannada news online

ದಾವಣಗೆರೆ: ಮಹರ್ಷಿ ವಾಲ್ಮೀಕಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ

ದಾವಣಗೆರೆ: ಮಹರ್ಷಿ ವಾಲ್ಮೀಕಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ವಿವಿಧ ಯೋಜನೆಗಳಿಗೆ ಜುಲೈ 18 ರಿಂದ ಆಗಸ್ಟ್ 30 ರವರೆಗೆ ಸುವಿಧ ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ನಿಗಧಿಗೊಳಿಸಲಾಗಿತ್ತು.

ಆದರೆ ಪೋರ್ಟಲ್‍ನಲ್ಲಿ ಹಲವಾರು ತಾಂತ್ರಿಕ ದೋಷಗಳಿರುವ ಕಾರಣ ಜನಸಾಮಾನ್ಯರಿಗೆ ಅನುಕೂಲವಾಗಲೆಂದು ಸರ್ಕಾರದ ಸೇವಾಸಿಂಧು (Sevasindhu) ಪೋರ್ಟಲ್-https:// sevasindhuservices.karnataka.gov.in/ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆ.15 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08192-233309 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top