ದಾವಣಗೆರೆ: ವಂದೇ ಭಾರತ್ ಎಕ್ಸ್ ಪ್ರೆಸ್ಸ್ ರೈಲು ಬೆಂಗಳೂರಿನಿಂದ ದಾವಣಗೆರೆ ಮಾರ್ಗವಾಗಿ ಧಾರವಾಡ ಸಂಚಾರಕ್ಕೆ ಸಜ್ಜಾಗಿದ್ದು, ಜೂನ್ 27 ರಂದು ಬೆಳಿಗ್ಗೆ 11 ಗಂಟೆಗೆ ರಾಷ್ಟ್ರದ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ದೆಹಲಿಯಿಂದ ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿಸಲಿದ್ದಾರೆ. ಧಾರವಾಡದಿಂದ ಹೊರಟು ಮಧ್ಯಾಹ್ನ 1 ಗಂಟೆಗೆ ದಾವಣಗೆರೆ ಆಗಮಿಸಲಿದ್ದು, ಈ ಶುಭ ಸಂದರ್ಭದಲ್ಲಿ ದಾವಣಗೆರೆ ರೈಲು ನಿಲ್ದಾಣದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅತ್ಯಾಧುನಿಕ ಅತಿ ವೇಗ ಹಾಗೂ ವಿಶ್ವಮಟ್ಟದ ಸವಲತ್ತುಗಳಿಂದ ರೂಪಿಸಲಾಗಿರುವ ಭಾರತೀಯ ರೈಲ್ವೆಯ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ನಿತ್ಯ ಬೆಂಗಳೂರು-ಧಾರವಾಡ ಮದ್ಯೆ ಸಂಚಾರ ಮಾಡಲಿದ್ದು, ಯಶವಂತಪುರ, ದಾವಣಗೆರೆ ಮತ್ತು ಹುಬ್ಬಳ್ಳಿಯಲ್ಲಿ ನಿಲುಗಡೆ ಹೊಂದಿದೆ.
ದಾವಣಗೆರೆ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸ್ವಾಗತಕ್ಕೆ ಕ್ಷಣಗಣನೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



