ದಾವಣಗೆರೆ: ಪ್ರಸಕ್ತ ಸಾಲಿನ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ವೀರಶೈವ ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ (ಪ್ರವರ್ಗ-3ಬಿ) ಸಮುದಾಯದ ಜನರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆ, ಬಸವ ಬೆಳಗು ಯೋಜನೆ, ವಿದೇಶ ವಿದ್ಯಾವಿಕಾಸ ಯೋಜನೆ, ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆಗಳ ಸಾಲ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತರು ಅರ್ಜಿ ಸಲ್ಲಿಸಲು ಆ.31 ರೊಳಗೆ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿರುತ್ತದೆ.
ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್‌ಸೈಟ್ https://kvldc.karnataka.gov.in ಇಲ್ಲಿ ಸಂಪರ್ಕಿಸಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.



