ಡಿವಿಜಿ ಸುದ್ದಿ, ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ವೆಬ್ಸೈಟ್ ಹಾಗೂ ಫೇಸ್ಬುಕ್ ಗೆ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ತಂತ್ರಜ್ಞಾನ ಬಹಳ ಎತ್ತರದ ಸ್ಥಾನಕ್ಕೆ ಬೆಳೆಯುತ್ತಿರುವ ಸಂದರ್ಭದಲ್ಲಿ ನಮ್ಮ ಮಹಿಳಾ ಘಟಕದ ಈ ಕಾರ್ಯ ಶ್ಲಾಘನೀಯ ಎಂದು ಹರ್ಷ ವ್ಯಕ್ತಪಡಿಸಿದರು.
ಈ ಸಮಾರಂಭದ ಅಧ್ಯಕ್ಷತೆಯನ್ನು ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ಮಧುರ ಅಶೋಕ್ ಕುಮಾರ್ ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ದೇವರಮನಿ ಶಿವಕುಮಾರ, ಸುವರ್ಣ ಚೆನ್ನಣ್ಣನವರ್, ಉಷಾಕಿರಣ್, ಸ್ವರೂಪ ರಾಜ್, ರೇಣುಕಾ ಪ್ರಸನ್ನ ಹಾಗೂ ಸಚ್ಚಿದಾನಂದ ಉಪಸ್ಥಿತರಿದ್ದರು.