ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ , ಶಾಸಕ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ನಾಳೆ (ಅ. 22) ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ನಾಯಕರ ಮಹತ್ವದ ಸಭೆ ನಡೆಯಲಿದೆ.
ಜಾತಿ ಗಣತಿ ವರದಿ ಸಂಪುಟ ಸಭೆಯಲ್ಲಿ ಚರ್ಚಿಸ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೇ ಅಖಿಲ ಭಾರತ ವೀರಶೈವ ಮಹಾಸಭಾ ಪಕ್ಷಾತೀತವಾಗಿ ಮಹತ್ವದ ಸಭೆ ನಡೆಯಲಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್-ಬಿಜೆಪಿ ಅಂತಾ ಏನೂ ಇಲ್ಲ.ಎಲ್ಲ ಪಕ್ಷಗಳ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಈ ಸಭೆಯಲ್ಲಿ ಭಾಗವಹಿಸುವರು. ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯ ಮುನ್ನವೇ ಈ ಸಭೆ ನಡೆದೇ ನಡೆಯುತ್ತದೆ ಎಂದರು.
ಇದಜ್ಕೂ ಮುನ್ನ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಗುರುವಾರ ಶಾಮನೂರು ಶಿವಶಂಕರಪ್ಪ ಹಾಗೂ ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ ಬಿದರಿ ಭೇಟಿ ಮಾಡಿ, ಅಕ್ಟೋಬರ್ 22 ರಂದು ನಡೆಯುವ ಸಭೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದರು. ಸಭೆಗೆ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಮಾಜಿ ಹಾಗೂ ಹಾಲಿ ಸಚಿವರು, ಶಾಸಕರು, ಸಂಸದರನ್ನು ಆಹ್ವಾನಿಸಿದ್ದಾರೆ.



