Connect with us

Dvgsuddi Kannada | online news portal | Kannada news online

ದಾವಣಗೆರೆ; ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಸಾಲ, ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ; ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಸಾಲ, ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದÀ 2022-23ನೇ ಸಾಲಿನ “ಕಾಯಕ ಕಿರಣ” ಹಾಗೂ “ಸ್ವ-ಸಹಾಯ ಸಂಘಗಳಿಗೆ ಉತ್ತೇಜನ” ಯೋಜನೆಯಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಇಚ್ಚಿಸುವ ವೀರಶೈವ ಲಿಂಗಾಯತ ಸಮುದಾಯದ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ಪ್ರವರ್ಗ-3 ಬಿ ವರ್ಗಕ್ಕೆ ಸೇರಿದವರಾಗಿರಬೇಕು, ಚಾಲ್ತಿಯಲ್ಲಿರುವ ಜಾತಿ ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಅರ್ಭರ್ಥಿಗಳ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/-ಗಳು ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1,20,000/- ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು, ಅರ್ಜಿ ಸಲ್ಲಿಸುವಾಗ ಆಧಾರ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಜು.28 ಕೊನೆಯ ದಿನಾಂಕವಾಗಿದ್ದು, ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ವೀರಶೈವ ಲಿಂಗಾಯತ ಸಮುದಾಯದ ಫಲಾನುಭವಿಗಳು ಅರ್ಜಿಯನ್ನು ನಿಗಮದ ವೆಬ್‍ಸೈಟ್ www.kvldcl.karnataka.gov.in ನಿಂದ ಡೌನ್‍ಲೋಡ್ ಮಾಡಿ ದಾಖಲೆಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ಕಛೇರಿಗೆ ಸಲ್ಲಿಸಬೇಕಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ: 080-22865522 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ದೂರವಾಣಿ ಸಂಖ್ಯೆ: 08192-230934 ಅನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top