ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯ ಪ್ರವಾಸ ಕೈಗೊಂಡಿದ್ದು, ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.
ನಂತರ ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಿದರು. ಇದಾದ ಬಳಿಕ ಬೆಂಗಳೂರು ವೈಟ್ ಫೀಲ್ಡ್ (ಕಾಡುಗೋಡಿ) ನಿಂದ ಕೃಷ್ಣರಾಜಪುರ ಮೆಟ್ರೋ ಮಾರ್ಗದ ಉದ್ಘಾಟಿಸಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದರು. ಇದಾದ ಬಳಿಕ 3.30ಕ್ಕೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಮಹಾಸಂಗಮ ಸಮಾವೇಶದಲ್ಲಿ ಭಾಗವಹಿಸಲು ದಾವಣಗೆರೆ ಪ್ರಧಾನಿ ಮೋದಿ ಅವರು ಆಗಮಿಸಲಿದ್ದಾರೆ. ಪ್ರಧಾನಿ ಸ್ವಾಗತಕ್ಕೆ ಸುತ್ತಮುತ್ತ ಬೆಣ್ಣೆ ನಗರದಿ ದಾವಣಗೆರೆ ಜಿಲ್ಲೆ ಸೇರಿ ಸುತ್ತಮುತ್ತಲಿನಿಂದ ಭಾರೀ ಸಂಖ್ಯೆ ಜನಸ್ತೋಮ ಸೇರಿದ್ದಾರೆ.