Connect with us

Dvgsuddi Kannada | online news portal | Kannada news online

ದಾವಣಗೆರೆ: ಪಿಎಂ ಆವಾಸ್ ಯೋಜನೆಯಡಿ 4 ಕೋಟಿಗೂ ಅಧಿಕ ಮನೆಗಳ ನಿರ್ಮಾಣ: ಉಜ್ವಲ 2.0 ಯೋಜನೆಯಡಿ ಮತ್ತೆ 4 ಲಕ್ಷ ಕುಟುಂಬಗಳಿಗೆ ಉಚಿತ ಗ್ಯಾಸ್ ಸಂಪರ್ಕ …!!!

ದಾವಣಗೆರೆ

ದಾವಣಗೆರೆ: ಪಿಎಂ ಆವಾಸ್ ಯೋಜನೆಯಡಿ 4 ಕೋಟಿಗೂ ಅಧಿಕ ಮನೆಗಳ ನಿರ್ಮಾಣ: ಉಜ್ವಲ 2.0 ಯೋಜನೆಯಡಿ ಮತ್ತೆ 4 ಲಕ್ಷ ಕುಟುಂಬಗಳಿಗೆ ಉಚಿತ ಗ್ಯಾಸ್ ಸಂಪರ್ಕ …!!!

ದಾವಣಗೆರೆ: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕಳೆದ 10 ವರ್ಷಗಳಲ್ಲಿ ದೇಶದ ಬಡವರಿಗಾಗಿ 4 ಕೋಟಿಗೂ ಅಧಿಕ ಮನೆಗಳನ್ನು ನಿರ್ಮಾಣ ಮಾಡಿಕೊಡಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

ದಾವಣಗೆರೆ ತಾಲ್ಲೂಕಿನ ಹೆಮ್ಮನಬೇತೂರು ಗ್ರಾಮದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಹಿಂದೆ 3.50 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರ 4 ಕೋಟಿಗೂ ಅಧಿಕ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಿದೆ. ಈ ಮೂಲಕ ಜನಪರ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ ಎಂದರು.

ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಬಡ ಕುಟುಂಬಗಳಿಗೆ ಉಚಿತ ಎಲ್.ಪಿ.ಜಿ ಸಂಪರ್ಕ ಕಲ್ಪಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಭಾರತ ವಿಶ್ವದ ಮೂರನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದ ಅವರು, ಭವಿಷ್ಯದಲ್ಲಿ ದೇಶದ ಕೃಷಿ ಕ್ಷೇತ್ರ ಸಂಪೂರ್ಣ ತಾಂತ್ರಿಕತೆಯಗಳ ಮೇಲೆ ನಡೆಯಲಿದೆ. ಇದರ ಭಾಗವಾಗಿ ಬೆಳೆಗಳಿಗೆ ಔಷಧಿ ಸಿಂಪರಣೆಗೆ 15 ಸಾವಿರ ಡ್ರೋಣ್ ಗಳನ್ನು ದೇಶದ ಸ್ತ್ರೀ ಶಕ್ತಿ ಸಂಘಗಳಿಗೆ ಶೇ.80 ರಷ್ಟು ಸಹಾಯಧನದೊಂದಿಗೆ ನೀಡಲಿದೆ. ಈ ಯೋಜನೆಗೆ ನಮೋ ಡ್ರೋಣ್ ದೀದಿ ಎಂದು ಹೆಸರಿಸಲಾಗಿದೆ. ಈ ಡ್ರೋಣ್ ಸಹಾಯದಿಂದ ನ್ಯಾನೋ ಯೂರಿಯಾವನ್ನು ದಿನಕ್ಕೆ 100 ಎಕರೆ ಸಿಂಪರಣೆ ಮಾಡಬಹುದಾಗಿದೆ. ಈ ಯೋಜನೆ ದೇಶದಲ್ಲಿ ಬಹುದೊಡ್ಡ ಬದಲಾವಣೆ ತರಲಿದೆ ಎಂದರು.

ದಾವಣಗೆರೆ ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ ಮಾತನಾಡಿ, ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರ ಕೈ ಗೊಂಡಿರುವ ಜನಕಲ್ಯಾಣ ಕಾರ್ಯಕ್ರಮಗಳಿಂದ ದೇಶದ ಅಭಿವೃದ್ಧಿಯ ಚಿತ್ರಣ ಬದಲಾಗಿದೆ ಎಂದರು. ಉಜ್ವಲ 2.0 ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ ಮತ್ತೆ ನಾಲ್ಕು ಲಕ್ಷ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಿಲಿಂಡರ್ ವಿತರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಹರಿಹರ ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕ ಎಸ್.ವಿ.ರಾಮಚಂದ್ರ, ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿ ಸ್ವಾಮಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಕಾಶ್ ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಸಚಿವರು ವಿತರಿಸಿದರು. ಸಂಕಲ್ಪಯಾತ್ರೆ ಅಂಗವಾಗಿ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಆಯೋಜಿಸಲಾಗಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top