ದಾವಣಗೆರೆ: ಜ.7ರಿಂದ 13ರ ವರೆಗೆ ರಾಜಸ್ಥಾನದ ಜೈಪುರದಲ್ಲಿ ಹಿರಿಯರ ಪುರುಷ ಹಾಗೂ ಮಹಿಳೆಯರ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗಳು ಜನವರಿ 7ರಿಂದ13ರವರೆಗೆ ನಡೆಯಲಿವೆ.
ಈ ಪಂದ್ಯಾವಳಿಗಳಿಗೆ ಆಯ್ಕೆ ಪ್ರಕ್ರಿಯೆಯನ್ನು ಡಿ.16 ರಂದು ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದ ವಾಲಿಬಾಲ್ ಅಂಕಣದಲ್ಲಿ ನಡೆಸಲಾಗುತ್ತದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ದಾವಣಗೆರೆ ಜಿಲ್ಲೆಯ ವಾಲಿಬಾಲ್ ಕ್ರೀಡಾಪಟುಗಳು ಹಾಗೂ ಸ್ಥಳೀಯ ವಾಲಿಬಾಲ್ ಕ್ರೀಡಾಪಟುಗಳು ಭಾಗವಹಿಸಬಹುದೆಂದು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ರೇಣುಕಾದೇವಿ ತಿಳಿಸಿದ್ದಾರೆ.



