ದಾವಣಗೆರೆ: ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂಗವಾಗಿ ಜಿಲ್ಲೆಯಲ್ಲಿ ಮತದಾರರ ವಿಶೇಷ ನೋಂದಣಿ ಅಭಿಯಾನವನ್ನು ಡಿಸೆಂಬರ್ 03 ಮತ್ತು 04 ರಂದು ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಅವರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ನಾಗರೀಕರು, ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡ್ಡಿ, ವರ್ಗಾವಣೆ ಹಾಗೂ ತೆಗೆದುಹಾಕುವ ಬಗ್ಗೆ ಸಂಬಂಧಿಸಿದ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಅಥವಾ Voter Help Line App(VHA) www.nvsp.in ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯವಾಣಿ ಸಂಖ್ಯೆ 1950ಕ್ಕೆ ಕಚೇರಿ ಸಮಯದಲ್ಲಿ ಉಚಿತವಾಗಿ ಕರೆ ಮಾಡಬಹುದು ಎಂದು ತಿಳಿಸಿದ್ದಾರೆ.



