Connect with us

Dvgsuddi Kannada | online news portal | Kannada news online

ದಾವಣಗೆರೆ: ಅಂತಿಮ ಮತದಾರರ ಪಟ್ಟಿ ಪ್ರಕಟ; ಜಿಲ್ಲೆಯಲ್ಲಿ 14,58,594 ಮತದಾರರು; 29,081 ಹೊಸ ಮತದಾರರು; ಜಿಲ್ಲಾಧಿಕಾರಿ

ದಾವಣಗೆರೆ

ದಾವಣಗೆರೆ: ಅಂತಿಮ ಮತದಾರರ ಪಟ್ಟಿ ಪ್ರಕಟ; ಜಿಲ್ಲೆಯಲ್ಲಿ 14,58,594 ಮತದಾರರು; 29,081 ಹೊಸ ಮತದಾರರು; ಜಿಲ್ಲಾಧಿಕಾರಿ

ದಾವಣಗೆರೆ: ಚುನಾವಣಾ ಆಯೋಗದ ನಿರ್ದೇಶನದನ್ವಯ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಜನವರಿ 22 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ 14,58,594 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ಪ್ರಚುರಪಡಿಸಿದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ತಿಳಿಸಿದರು. ಆಯೋಗದ ನಿರ್ದೇಶನದನ್ವಯ ಅಕ್ಟೋಬರ್ 27 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು ಅದರಲ್ಲಿ 14,53,818 ಮತದಾರರಿದ್ದರು. ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 2024 ರ ಜನವರಿ 12 ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು ಈ ವೇಳೆ ಹೊಸ ನೊಂದಣಿ, ಬೇರೆ ಕ್ಷೇತ್ರಕ್ಕೆ ವರ್ಗಾವಣೆ ಹಾಗೂ ಮರಣ ಹೊಂದಿದವರನ್ನು ಪಟ್ಟಿಯಿಂದ ರದ್ದುಪಡಿಸಲಾಗಿದ್ದು ಅಂತಿಮ ಮತದಾರರ ಪಟ್ಟಿಯನ್ವಯ ಜಿಲ್ಲೆಯಲ್ಲಿ 7,27,246 ಪುರುಷ, 7,31,230 ಮಹಿಳೆಯವರು, 118 ಇತರೆ ಸೇರಿ 14,58,594 ಮತದಾರರಿದ್ದಾರೆ. ಮತದಾರರ ಪಟ್ಟಿಯನ್ನು ಎಲ್ಲಾ ತಹಶೀಲ್ದಾರರ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದ್ದು ಸಾರ್ವಜನಿಕರು ತಮ್ಮ ಮತದಾರರ ವಿವರವನ್ನು ಪರಿಶೀಲಿಸಿಕೊಳ್ಳಬೇಕೆಂದರು.

ಪರಿಷ್ಕರಣೆಯ ವೇಳೆ ಒಟ್ಟು 18714 ಮತದಾರರನ್ನು ದಾಖಲೆಗಳ ಪರಿಶೀಲನೆ ಮಾಡಿ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಇದರಲ್ಲಿ ಶೇ 90 ರಷ್ಟು ಮರಣ ಹೊಂದಿದವರು ಹಾಗೂ ಎರಡೂ ಕಡೆ ಪಟ್ಟಿಯಲ್ಲಿ ಸೇರ್ಪಡೆಯಾದವುಗಳಾಗಿರುತ್ತವೆ.
ಯುವ ಮತದಾರರ ನೊಂದಣಿ; ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ 29081 ಯುವ ಮತದಾರರನ್ನು ಹೊಸದಾಗಿ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಸೇರ್ಪಡೆಯಾದವರಲ್ಲಿ ಜಗಳೂರು 4239, ಹರಿಹರ 4646, ದಾವಣಗೆರೆ ಉತ್ತರ 4032, ದಾವಣಗೆರೆ ದಕ್ಷಿಣ 3581, ಮಾಯಕೊಂಡ 4176, ಚನ್ನಗಿರಿ 3884, ಹೊನ್ನಾಳಿ ಕ್ಷೇತ್ರದಲ್ಲಿ 4523 ಯುವ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ನೊಂದಾಯಿಸಿದ್ದಾರೆ.ಅಂತಿಮ ಮತದಾರರ ಪಟ್ಟಿಯನ್ವಯ ಜಗಳೂರು 195640, ಹರಿಹರ 209708, ದಾವಣಗೆರೆ ಉತ್ತರ 245823, ದಾವಣಗೆರೆ ದಕ್ಷಿಣ 215300, ಮಾಯಕೊಂಡ 192925, ಚನ್ನಗಿರಿ 200828, ಹೊನ್ನಾಳಿ 198370 ಮತದಾರಿದ್ದಾರೆ. ಜಿಲ್ಲೆಯಲ್ಲಿ 1693 ಮತಗಟ್ಟೆಗಳಿದ್ದು ಜಗಳೂರು 263, ಹರಿಹರ 228, ದಾವಣಗೆರೆ ಉತ್ತರ 245, ದಾವಣಗೆರೆ ದಕ್ಷಿಣ 217, ಮಾಯಕೊಂಡ 240, ಚನ್ನಗಿರಿ 255, ಹೊನ್ನಾಳಿ 245 ಮತಗಟ್ಟೆಗಳಿವೆ.

18 ವರ್ಷ ತುಂಬುವರು ನೊಂದಣಿಗೆ ಅವಕಾಶ; ಹೊಸ ಮತದಾರರು ಆನ್‍ಲೈನ್ ಮೂಲಕ ವೋಟರ್ ಹೆಲ್ಪ್‍ಲೈನ್ ಆಫ್, https;//voters.eci.gov.in ಹಾಗೂ https;//ceo.karnataka.gov.in ನಲ್ಲಿ ನೊಂದಾಯಿಸಬಹುದಾಗಿದ್ದು 2024 ರ ಏಪ್ರಿಲ್ 1, ಜುಲೈ 1 ಹಾಗೂ ಅಕ್ಟೋಬರ್ 1 ಕ್ಕೆ 18 ವರ್ಷ ಪೂರ್ಣಗೊಳ್ಳುವವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಅವಕಾಶ ಇರುತ್ತದೆ. ಆದರೆ ಚುನಾವಣೆ ವೇಳಾಪಟ್ಟಿ ಒಳಗೆ 18 ವರ್ಷ ತುಂಬುವವರು ಮಾತ್ರ ಮತದಾನ ಮಾಡಲು ಅರ್ಹರಾಗುತ್ತಾರೆ. ಮತದಾರರು ಯಾವುದೇ ಸಹಾಯ ಬೇಕಿದ್ದಲ್ಲಿ ಜಿಲ್ಲಾ ಸಂಪರ್ಕ ಸಂಖ್ಯೆ 1950 ಗೆ ಕರೆ ಮಾಡಬಹುದಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top