ದಾವಣಗೆರೆ; ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಘೋಷಿಸಲಿದ್ದು, ಜಿಲ್ಲೆಯ ಎಲ್ಲಾ ಮತದಾರರು, ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಪರಿಶೀಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ತಿಳಿಸಿದ್ದಾರೆ.
ಮತದಾರರು ಓಟರ್ ಹೆಲ್ಪ್‌ಲೈನ್ ಆ್ಯಪ್ ಡೌನ್ ಲೋಡ್ ಮಾಡಿಕೊಂಡು ನಿಮ್ಮ ಮೊಬೈಲ್ ನಂಬರ್ ಮೂಲಕ ಲಾಗಿನ್ ಆಗಿ ಓಟಿಪಿ ಎಂಟರ್ ಮಾಡಿ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಹುಡುಕಲು ಮೊಬೈನಲ್ಲಿ ತೋರಿಸಿರುವ 4ನೇ ಆಯ್ಕೆಯನ್ನು ಒತ್ತಿ ನಂತರ ನಿಮ್ಮ ಓಟರ್ ಐಡಿ ನಂಬರ್ ನಮೂದಿಸಿ ಸರ್ಚ್ ಬಟನ್ ಒತ್ತಿ ಅಥವಾ ಟೋಲ್ ಫ್ರೀ ನಂಬರ್ 1950ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.



