Connect with us

Dvgsuddi Kannada | online news portal | Kannada news online

ಹವಾಮಾನ; ದಾವಣಗೆರೆ ಜಿಲ್ಲೆಗೆ ಆರೆಂಜ್ ಅಲರ್ಟ್; ಇನ್ನೂ ಐದು ದಿನ ಡೆಂಜರ್ …!!!

IMG 20240501 205028

ಪ್ರಮುಖ ಸುದ್ದಿ

ಹವಾಮಾನ; ದಾವಣಗೆರೆ ಜಿಲ್ಲೆಗೆ ಆರೆಂಜ್ ಅಲರ್ಟ್; ಇನ್ನೂ ಐದು ದಿನ ಡೆಂಜರ್ …!!!

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಸೇರಿ ದಾವಣಗೆರೆ ಜಿಲ್ಲೆಯಲ್ಲಿ ಇನ್ನು ಐದು ದಿನ ಬಿಸಿ ಗಾಳಿ ಬೀಸಲಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ತೀವ್ರ ಬಿಸಿಲಿನ ಗಾಳಿ ಹಿನ್ನೆಲೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಆರೆಂಜ್ ಅಲರ್ಟ್‌ ಘೋಷಿಸಿ ಎಚ್ಚರಿಕೆ ನೀಡಿದೆ.

ಕಳೆದ ಎರಡು ವಾರದ ಹಿಂದೆ ರಾಜ್ಯದ ಕೆಲ ಭಾಗದಲ್ಲಿ ಮಳೆಯಾಗಿತ್ತು. ಮಳೆ ನಂತರ ಬಿಸಿ ಗಾಳಿ ಇನ್ನಷ್ಟು ಹೆಚ್ಚಾಗಿದೆ. ಮೇ 1ರಿಂದ 5ರವರೆಗೆ ತೀವ್ರ ಬಿಸಿ ಗಾಳಿ ಇರಲಿದೆ. ಆದ್ದರಿಂದ ಐದು ದಿನ ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಪ್ರಕಟಿಸಲಾಗಿದೆ. ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಯಾವ ಜಿಲ್ಲೆಯಲ್ಲಿ ಅಲರ್ಟ್?‌; ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ. ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್‌, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕೆಲವು ರವಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯನಗರ. ಈ ಐದು ದಿನ ಬಿಸಿ ಗಾಳಿ ಮುದುವರೆಯಲಿದೆ. ಹೀಗಾಗಿ ಸಾರ್ಜಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಸಾರ್ವಜನಿಕರಿಗೆ ಎಚ್ಚರಿಕೆ

  •  ಮಧ್ಯಾಹ್ನ 12.00 ರಿಂದ 3.00 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ
  • ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ
  • ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ
  • ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್ ಗಳನ್ನು ಬಳಸಿ
  • ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ
  • ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ
  • ದೇಹವನ್ನು ನಿರ್ಜಲೀಕರಣಗೊಳಿಸುವ ಆಲೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಿ
  • ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ
  • ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ
  • ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ
  • ನಿಮಗೆ ಮೂರ್ಛ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ
  • ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ
    ಇತ್ಯಾದಿಗಳನ್ನು ಬಳಸಿ ದೇಹವನ್ನು ಮರು- ಜಲೀಕರಣ ಮಾಡಲು ಸಹಾಯ ಮಾಡುತ್ತದೆ
  • ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ
  • ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ಮತ್ತುರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ
  • ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top