ದಾವಣಗೆರೆ: ವಿಶ್ವ ಆರೋಗ್ಯ ದಿನಾಚರಣೆ 2022 ಅಂಗವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇವರ ಸಹಯೋಗದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ವಿಶೇಷ ವಿಕಲಚೇತನರಿಗೆ ತಂಬಾಕು ಉತ್ಪನ್ನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮ ಮತ್ತು ಆರೋಗ್ಯ ತಪಾಸಣೆಯನ್ನು ನಾಳೆ (ಏ.07) ಬೆಳಿಗ್ಗೆ 10ಕ್ಕೆ ವಿದ್ಯಾನಗರದ ಕುವೆಂಪು ಕನ್ನಡ ಭವನ (ಸರ್ಕಾರಿ ಕಲಾ ಕಾಲೇಜು ಹಿಂಭಾಗ) ದಾವಣಗೆರೆ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ನಾಯಕ್ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಸಿಆರ್‍ಸಿ ಕೇಂದ್ರದ ಡಾ. ಉಮಾಶಂಕರ್ ಮೊಹಾಂತಿ, ಡಿಹೆಚ್‍ಒ ಡಾ. ನಾಗರಾಜ್, ನಿವೃತ್ತ ಪೊಲೀಸ್ ಅಧೀಕ್ಷಕ ರವಿನಾರಾಯಣ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಕೃಷ್ಣ ಪ್ರಕಾಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಿ.ಡಿ. ರಾಘವನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.