ದಾವಣಗೆರೆ: ನಮ್ಮ ದೇಶ ಹಿಂದೂ ರಾಷ್ಟ್ರವಾದ್ರೆ, ದೇಶಕ್ಕೆ ದೊಡ್ಡ ಅಪಾಯವಿದೆ. ಜಾತ್ಯಾತೀತ ತತ್ವ ಬಿಟ್ಟು ಧರ್ಮದ ಹಿಂದೆ ಹೋದ್ರೆ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದಾರೆ.
ರುದ್ರನಕಟ್ಟೆ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಹಿಂದು ರಾಷ್ಟ್ರವಾದರೆ ಪಾಕಿಸ್ತಾನ, ಅಫ್ಘಾನಿಸ್ತಾನ ರಾಇತಿ ಆಗುತ್ತದೆ. ಪಾಕಿಸ್ತಾನ, ಅಫ್ಘಾನಿಸ್ತಾನ ಧರ್ಮದ ಹೆಸರಲ್ಲಿ ಸರ್ವಾಧಿಕಾರ ಮಾಡಿ ದಿವಾಳಿಯಾಗಿವೆ. ದೇಶ ಜಾತ್ಯಾತೀತ ತತ್ವ ಬಿಟ್ಟು ಧರ್ಮದ ಹಿಂದೆ ಹೋದರೆ ಅಭಿವೃದ್ಧಿ ಕಾಣಲ್ಲ ಎಂದರು.
ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನಿಂದ ಜಾತ್ಯಾತೀತ ತತ್ವಕ್ಕೆ ಅಪಾಯ ಶುರುವಾಗಿದೆ. ಬಿಜೆಪಿಯ ಅಂಗ ಸಂಘಟನೆಗಳು ಹಿಂದೂ ದೇಶ ಮಾಡೋಕೆ ಹೊರಟಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಟ್ಟರೆ ನಮ್ಮ ದೇಶ ಕೂಡ ಪಾಕಿಸ್ತಾನ ಅಪ್ಘಾನಿಸ್ತಾನ ಆಗುತ್ತದೆ. ಧರ್ಮದ ಮೇಲೆ ರಾಜಕೀಯ ಮಾಡುವ ಪಕ್ಷಗಳ ಬಗ್ಗೆ ನಾವು ಹುಷಾರಾಗಿರಬೇಕು. ಧರ್ಮದಿಂದ ಹಿಂದುಳಿದವರು ಮೇಲೇಳೋಕೆ ಸಾಧ್ಯವಾಗುತ್ತಿಲ್ಲ. ಇತಿಹಾಸವನ್ನು ನೋಡಿ ನಾವು ಪಾಠ ಕಲಿಯಬೇಕು. ಇತಿಹಾಸ ನೋಡಿ ನಾವು ದೇಶವನ್ನು ಕಟ್ಟಬೇಕು ಎಂದರು.,



