Connect with us

Dvgsuddi Kannada | online news portal | Kannada news online

ದಾವಣಗೆರೆ: ಜೂನ್ 21 ರಂದು 9ನೇ ಅಂತರಾಷ್ಟ್ರೀಯ ಯೋಗ ದಿನ; ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ; ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಾವಣಗೆರೆ

ದಾವಣಗೆರೆ: ಜೂನ್ 21 ರಂದು 9ನೇ ಅಂತರಾಷ್ಟ್ರೀಯ ಯೋಗ ದಿನ; ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ; ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಾವಣಗೆರೆ: 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 21 ರಂದು ಬೆಳಿಗ್ಗೆ 5 ಗಂಟೆಗೆ ನಗರದ ದೇವರಾಜ ಅರಸ್ ಬಡಾವಣೆ ಬಿ ಬ್ಲಾಕ್ ನಲ್ಲಿರುವ ಈಜುಕೊಳದ ಹತ್ತಿರವಿರುವ ಮೈದಾನದಲ್ಲಿ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.

ಯೋಗ ದಿನಾಚರಣೆ ಸಿದ್ಧತೆ ಕುರಿತು ಮಾತನಾಡಿದರು. ಯೋಗ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸ್ಕಾರ್ಟ್‍ಸಿಟಿ ಲಿ., ಜಿಲ್ಲಾ ಯೋಗ ಒಕ್ಕೂಟ, ಜಿಲ್ಲಾ ಪೋಲೀಸ್ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ತಪೋವನ ಆಯುರ್ವೇದ, ಯೋಗ ಮತ್ತು ನ್ಯಾಚುರೋಪತಿ ಮೆಡಿಕಲ್ ಕಾಲೇಜ್, ಅಶ್ವಿನಿ ಆಯುರ್ವೇದ ಮೆಡಿಕಲ್ ಕಾಲೇಜ್, ಸುಶೃತ ಆಯುರ್ವೇದ ಮೆಡಿಕಲ್ ಕಾಲೇಜ್, ಎನ್.ಸಿ.ಸಿ. ಘಟಕ, ಎನ್.ಎಸ್.ಎಸ್, ಘಟಕ, ಪ್ರಜಾಪಿತ ಬ್ರಹ್ಮಕುಮಾರೀಸ್, ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ, ಪತಂಜಲಿ ಯೋಗ ಸಮಿತಿ, ದಾವಣಗೆರೆ ಇವರುಗಳ ಸಹಯೋಗದಲ್ಲಿ ಆಯೋಜಿಸಲಾಗಿದೆ.

9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವ ಕುಟುಂಬಕ್ಕಾಗಿ ಯೋಗ ಮತ್ತು ಪ್ರತಿ ಅಂಗಳದಲ್ಲಿ ಯೋಗ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತದೆ. ಜೂನ್ 21 ರಂದು ದೇವರಾಜ ಅರಸ್ ಬಡಾವಣೆ ಬಿ. ಬ್ಲಾಕ್‍ನ ಈಜುಕೊಳದ ಹತ್ತಿರ ಬೆಳಗ್ಗೆ 5 ಗಂಟೆಯಿಂದ 6 ರ ವರೆಗೆ ಬ್ರಹ್ಮಕುಮಾರೀಸ್ ಇವರಿಂದ ಧ್ಯಾನ, ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ 6 ರಿಂದ 6.20 ರವರೆಗೆ ಅಷ್ಠ ನಮಸ್ಕಾರ, ಬೆ.6.20 ರಿಂದ 6.55 ರ ವರೆಗೆ ಉದ್ಘಾಟನೆ ಮತ್ತು ವೇದಿಕೆ ಕಾರ್ಯಕ್ರಮ ಇರುತ್ತದೆ. ನಂತರ 7 ರಿಂದ 7.45 ರ ವರೆಗೆ ಸಾಮಾನ್ಯ ಯೋಗ ಇರುತ್ತದೆ. ಈ ಕಾರ್ಯಕ್ರಮದಲ್ಲಿ 4 ರಿಂದ 5 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದ್ದು ಸಾರ್ವಜನಿಕರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸಬಹುದಾಗಿದೆ. ಯೋಗ ಪ್ರಮುಖರಾಗಗಿ ವೈದ್ಯಶ್ರೀ ಚನ್ನಬಸವ ಭಾಗವಹಿಸುವರು ಎಂದರು.

ಶಿಷ್ಟಾಚಾರದನ್ವಯ ಕಾರ್ಯಕ್ರಮವನ್ನು ಗಣಿ ಮತ್ತು ಭೂ ವಿಜ್ಞಾನ ಮತ್ತು ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸುವರು. ದಾವಣಗೆರೆ ದಕ್ಷಿಣ ವಿಧಾನಸಭಾ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ದಾವಣಗೆರೆ ಲೋಕಸಭಾ ಸದಸ್ಯರಾದ ಡಾ. ಜಿ.ಎಂ ಸಿದ್ದೇಶ್ವರ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಹರಿಹರ ಶಾಸಕ ಬಿ.ಪಿ. ಹರೀಶ್, ಮಾಯಕೊಂಡ ಶಾಸಕ ಕೆ.ಎಸ್ .ಬಸವಂತಪ್ಪ, ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ.ಪಿ ನಂಜುಂಡಿ ವಿಶ್ವಕರ್ಮ, ರವಿಕುಮಾರ್.ಎನ್, ಡಾ.ತೇಜಸ್ವಿನಿ ಗೌಡ, ಎಸ್.ಎಲ್ .ಬೋಜೇಗೌಡ, ವೈ.ಎ. ನಾರಾಯಣ ಸ್ವಾಮಿ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಕೆ. ಅಬ್ದುಲ್ ಜಬ್ಬಾರ್, ದಾವಣಗೆರೆ ಮಹಾನಗರ ಪಾಲಿಕೆಯ ಮಹಾ ಪೌರರಾದ ವಿನಾಯಕ. ಡಿ.ಹೆಚ್ ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಗುಂಜನ್ ಕೃಷ್ಣ, ಬೆಂಗಳೂರು, ಆಯುಣ್ ಇಲಾಖೆಯ ಆಯುಕ್ತರಾದ ಜೆ. ಮಂಜುನಾಥ, ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕ ಕೆ. ತ್ಯಾಗರಾಜನ್ ಭಾಗವಹಿಸುವರು.

ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಜಿಲ್ಲಾ ಯೋಗ ಅಸೋಷಿಯೇಷನ್ ಅಧ್ಯಕ್ಷ ವಾಸುದೇವ ರಾಯ್ಕರ್, ಬ್ರಹ್ಮಕುಮಾರಿ ಈಶ್ವರಿ ವಿವಿ ಸಂಚಾಲಕಿ ಲೀಲಾ, ಶ್ರೀ ಪತಂಜಲಿ ಶಿಕ್ಷಣ ಸಮಿತಿ ಉಪಾಧ್ಯಕ್ಷ ಕಲ್ಲೇಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ; ಶಂಕರಗೌಡ ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top