Connect with us

Dvgsuddi Kannada | online news portal | Kannada news online

ಅಂತರಾಷ್ಟ್ರೀಯ ಯೋಗ ದಿನಾಚರಣೆ; ದಾವಣಗೆರೆ ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಕಾರ್ಯಕ್ರಮ

ದಾವಣಗೆರೆ

ಅಂತರಾಷ್ಟ್ರೀಯ ಯೋಗ ದಿನಾಚರಣೆ; ದಾವಣಗೆರೆ ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಕಾರ್ಯಕ್ರಮ

ದಾವಣಗೆರೆ: ಜಿಲ್ಲಾ ಆಡಳಿತದಿಂದ ಜೂನ್ 21ರಂದು ನಡೆಯುವ 8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಗುತ್ತಿದ್ದು ಜಿಲ್ಲೆಯ 3 ಐತಿಹಾಸಿಕ ಸ್ಥಳಗಳಲ್ಲಿ ಯೋಗ ದಿನಾಚರಣೆಯನ್ನು ಆಚರಣೆ ಮಾಡುವ ಮೂಲಕ ಯೋಗಾಭ್ಯಾಸವನ್ನು ಮಾಡಲಾಗುತ್ತದೆ. ಸಂತೆಬೆನ್ನೂರು ಐತಿಹಾಸಿಕ ಸ್ಥಳ ಪುಷ್ಕರಣಿ ಆವರಣ, ಹರಿಹರದ ಹರಿಹರೇಶ್ವರ ದೇವಸ್ಥಾನದ ಆವರಣ ಹಾಗೂ ಹೊನ್ನಾಳಿಯ ಚನ್ನಪ್ಪಸ್ವಾಮಿ ದೇವಸ್ಥಾನ, ಹಿರೇಕಲ್ಮಠ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾತನಾಡಿದ ಅವರು, ಯೋಗ ದಿನಾಚರಣೆಯನ್ನು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಭಾರತೀಯ ಪುರಾತತ್ವ ಇಲಾಖೆ, ಸ್ಮಾರ್ಟ್ ಸಿಟಿ ಲಿಮಿಟೆಡ್, ಜಿಲ್ಲಾ ಯೋಗ ಒಕ್ಕೂಟ, ಪ್ರವಾಸೋದ್ಯಮ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.

ಜೂ.21ರಂದು ಬೆಳಗ್ಗೆ 5.30 ರಿಂದ ಏಕಕಾಲದಲ್ಲಿ ಒಟ್ಟು ಮೂರು ಕಡೆ ಯೋಗ ಮತ್ತು ಕಾರ್ಯಕ್ರಮ ಏರ್ಪಡಿಸಲಾಗಿದೆ. 5.30ರಿಂದ 6.30 ರವರೆಗೆ ಧ್ಯಾನ, ಬೆಳಗ್ಗೆ 6.30 ರಿಂದ 7 ಗಂಟೆಯವರೆಗೆ ಉದ್ಘಾಟನೆ, ಬೆ.7 ರಿಂದ 7.30 ರವರೆಗೆ ಸಾಮಾನ್ಯ ಯೋಗ ಶಿಷ್ಟಾಚಾರ, 7.30 ರಿಂದ 8.30 ವೇದಿಕೆ ಕಾರ್ಯಕ್ರಮ ಇರಲಿದ್ದು ಭಾಗವಹಿಸಿದ ಎಲ್ಲರಿಗೂ ನಂತರ ಉಪಹಾರದ ವ್ಯವಸ್ಥೆ ಇರುತ್ತದೆ.

ಅಂತರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ಜೂನ್ 18 ರ ಶನಿವಾರ ಬೆಳಗ್ಗೆ 7 ಗಂಟೆಯಿಂದ ಯೋಗ ನಡಿಗೆಯು ಹೈಸ್ಕೂಲ್ ಮೈದಾನದಿಂದ ಮೋತಿ ವೀರಪ್ಪ ಕಾಲೇಜು ಆವರಣದವರೆಗೆ ನಡೆಯಲಿದ್ದು, ಪಂಚಮಸಾಲಿ ಮಠದ ಶ್ರೀ ವಚನಾನಂದ ಸ್ವಾಮೀಜಿಯವರು ಭಾಗವಹಿಸುವರು. ಇದೇ ದಿನ ಹರಿಹರದಲ್ಲಿ ಯೋಗ ನಡಿಗೆ ಬೆ.7ರಿಂದ ಆರಂಭವಾಗಲಿದ್ದು ಗಾಂಧಿ ಮೈದಾನದಿಂದ ಹರಿಹರೇಶ್ವರ ದೇವಸ್ಥಾನದ ವರೆಗೆ ನಡೆಯಲಿದೆ.

ಜೂ.9ರಂದು ಯೋಗ ದಿನಾಚರಣೆ ಅಂಗವಾಗಿ ದಾವಣಗೆರೆ ಲಯನ್ಸ್ ಕ್ಲಬ್ ನಲ್ಲಿ ಯೋಗ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.ಜೂ.21ರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಂತೆಬೆನ್ನೂರು ಕಾರ್ಯಕ್ರಮದಲ್ಲಿ ವೈದ್ಯಶ್ರೀ ಚನ್ನಬಸವಣ್ಣನವರು ಮುಖ್ಯ ಯೋಗಪಟುವಾಗಿ ಭಾಗವಹಿಸುವರು. ದಾವಣಗೆರೆಯಿಂದ ಆಗಮಿಸುವ ಯೋಗಾಸ್ಥರಿಗೆ ಹೈಸ್ಕೂಲ್ ಮೈದಾನದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ 8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಯಶಸ್ವಗೊಳಿಸಬೇಕೆಂದು ಜಿಲ್ಲಾಧಿಕಾರಿಯವರು ಮನವಿ ಮಾಡಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಲೋಕೇಶ್, ಜಿಲ್ಲಾ ಆಯುಷ್ ಅಧಿಕಾರಿ ಶಂಕರಗೌಡ, ಯೋಗ ಒಕ್ಕೂಟದ ವಾಸು ಭಾಗವಹಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top