ದಾವಣಗೆರೆ: ಆಗಸ್ಟ್12ರಿಂದ ಮೂರು ದಿನ ವಿಶ್ವ ದಾಖಲೆಯ ಬೃಹತ್ ಯೋಗಾಥಾನ್ ಕಾರ್ಯಕ್ರಮ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯಲ್ಲಿ ಆಗಸ್ಟ್ 12, 13, 14 ರಂದು ಮೂರು ದಿನಗಳ ಕಾಲ ಬೃಹತ್ ಯೋಗಥಾನ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಗಿನ್ನೀಸ್ ಅಥವಾ ವಿಶ್ವ ದಾಖಲೆ ನಿರ್ಮಿಸಲು ರಾಜ್ಯದಾದ್ಯಂತ ಏಕಕಾಲಕ್ಕೆ ಯೋಗಭ್ಯಾಸ ನಡೆಯುವ ಹಿನ್ನೆಲೆಯಲ್ಲಿ ಯೋಗಥಾನ್-2022 ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸೋಣ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆಯುಷ್ ಟಿ.ವಿ, ಆಯುಷ್ ಇಲಾಖೆ, ಜಿಲ್ಲಾ ಯೋಗ ಒಕ್ಕೂಟ ಮತ್ತು ನೆಹರೂ ಯುವ ಕೇಂದ್ರಗಳ ಸಹಭಾಗಿತ್ವದಲ್ಲಿ ‘ಯೋಗಥಾನ್-2022’ ಕಾರ್ಯಕ್ರಮದ ಗಿನ್ನೀಸ್ ಅಥವಾ ವಿಶ್ವ ದಾಖಲೆ ಸ್ಥಾಪಿಸುವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯೋಗಥಾನ್ ಕಾರ್ಯಕ್ರಮವು ಮೂರು ದಿನಗಳ ಕಾಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಆಗಸ್ಟ್ 12 ರಂದು ಯುವೋತ್ಸವ, 13 ರಂದು ಬುಕ್ ಆಫ್ ರೇಕಾರ್ಡ್ ಕಾರ್ಯಕ್ರಮ ಹಾಗೂ 14 ರಂದು 15,000 ಕ್ಕೂ ಹೆಚ್ಚಿನ ಯೋಗಾಸಕ್ತರನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಸೇರಿಸಿ ಗಿನ್ನೀಸ್ ಹಾಗೂ ವಿಶ್ವ ದಾಖಲೆ ನಿರ್ಮಿಸಲು ಯೋಗಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸ್ವಯಂ ಸೇವಕರು, ಯೋಗ ಒಕ್ಕೂಟದ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಮಾತನಾಡಿ, ಈ ಕಾರ್ಯಕ್ರಮಕ್ಕೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತಿದೆ. ಯೋಗಾಥಾನ್‍ನಲ್ಲಿ ಭಾಗವಹಿಸಲು ಕಡ್ಡಾಯವಾಗಿ ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಾಗಿದೆ.

ಕಾರ್ಯಕ್ರಮದ ಆವರಣಕ್ಕೆ ಪ್ರವೇಶಿಸುವ ಹಾಗೂ ಹೊರಗಡೆ ತೆರಳುವ ಎರಡೂ ಮಾರ್ಗಗಳಲ್ಲಿ ಪಾಲ್ಗೊಂಡವರ ನೋಂದಣಿ ಮತ್ತು ಪರಿಶೀಲನೆ ನಡೆಯುತ್ತದೆ, ಭಾಗವಹಿಸಿದವರ ಸಂಖ್ಯೆಯನ್ನು ನಿಖರವಾಗಿ ದಾಖಲಿಸಿಕೊಳ್ಳಲು ಈ ಕ್ರಮವಹಿಸಲಾಗುತ್ತಿದೆ. ಯೋಗಥಾನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರೆಲ್ಲರಿಗೂ ಪ್ರತಿ ಶನಿವಾರ ಬೆ.06 ರಿಂದ 08 ರವರೆಗೆ ಪರಿಣಿತರಿಂದ ತರಬೇತಿ ನೀಡಲಾಗುವುದು ಎಂದರು.

ಸಭೆಯಲ್ಲಿ ಜಿ.ಪಂ ಸಿಇಓ ಡಾ.ಎ.ಚನ್ನಪ್ಪ, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಸರಗಿ, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಹೊನ್ನಾಳಿ ತಹಶೀಲ್ದಾರ್ ರಶ್ಮಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ, ಡಿಡಿಪಿಐ ತಿಪ್ಪೇಶಪ್ಪ, ಯೋಗ ಒಕ್ಕೂಟದ ವಾಸುದೇವ ರಾಯ್ಕರ್, ಜೈಮುನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಯೋಗ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *