ದಾವಣಗೆರೆ: ಯೋಗಯುಕ್ತ ರೋಗಮುಕ್ತ ಸಮಾಜಕ್ಕಾಗಿ ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟದಿಂದ ಮಕರ ಸಂಕ್ರಾಂತಿ ದಿನದಂದು ಮನೆ ಮನೆಯಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮಕ್ಕೆ ಭಾಗಿಯಾಗುವಂತೆ ಕರೆ ನೀಡಿದೆ.
ಭಾರತ ಸರ್ಕಾರ, ಆಯುಷ್ ಮಂತ್ರಾಲಯ ಮತ್ತು ನವದೆಹಲಿಯ ಮೊರಾರ್ಜಿ ದೇಸಾಯಿ ಯೋಗ ಸಂಸ್ಥೆ ವತಿಯಿಂದ ಮಕರ ಸಂಕ್ರಾಂತಿ ದಿನದಂದು ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆಯಂತೆ ಸಾಮೂಹಿಕ ಸೂರ್ಯ ನಮಸ್ಕಾರಕ್ಕೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ದಾವಣಗೆರೆ ಜಿಲ್ಲೆಯ ಜನರು ಇಡೀ ದೇಶದಲ್ಲಿ ವಿಶ್ವ ದಾಖಲೆಯ 75 ಕೋಟಿ ಸೂರ್ಯ ನಮಸ್ಕಾರದಲ್ಲಿ ಭಾಗಿಯಾಗಿ ಕೊರೊನಾ ನಿಯಮ ಪಾಲಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ 9844040813, 9449629061, 9845685224, 9845451787 ಸಂಪರ್ಕಿಸಿ.



