ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಕೇಂದ್ರ ಪುರುಸ್ಕೃತ ಆಯುಷ್ಮಾನ್ ಭಾರತ್ ಯೋಜನೆಯಡಿ ಮೇಲ್ದರ್ಜೆಗೇರಿಸಲಾದ 03 ಸರ್ಕಾರಿ ಆಯುರ್ವೇದ ಕ್ಷೇಮ ಕೇಂದ್ರಗಳಿಗೆ ತಾತ್ಕಾಲಿಕವಾಗಿ ಮಂಜೂರಾಗಿರುವ ಯೋಗ ತರಬೇತಿದಾರರ ಹುದ್ದೆಗೆ ನೇಮಕ ಮಾಡಿಕೊಳ್ಳಲು ಡಿ. 30 ರಂದು ಸಂದರ್ಶನ ಏರ್ಪಡಿಸಲಾಗಿದೆ.
ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಅಲ್ಪ ಸಮಯದ (ಪಾರ್ಟ್ಟೈಮ್) ಯೋಗ ತರಬೇತಿದಾರರ 1 & 2 ಹುದ್ದೆಗೆ ಮೆರಿಟ್ ಆಧಾರದ ಮೇಲೆ ನೇಮಕಾತಿಗಾಗಿ, ಡಿ.30 ರಂದು ಮದ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಕಚೇರಿಯ ಸಭಾಂಗಣ, ದಾವಣಗೆರೆ ಇಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಸೂಚನೆ ನೀಡಲಾಗಿದೆ.
ಹುದ್ದೆಗಳ ವಿವರ ಇಂತಿದೆ: ಆಯುರ್ವೇದ ಕ್ಷೇಮ ಕೇಂದ್ರ, ಕಾಡಜ್ಜಿ-02 ಹುದ್ದೆ, ಆಯುರ್ವೇದ ಕ್ಷೇಮ ಕೇಂದ್ರ, ಕನಗೊಂಡನಹಳ್ಳಿ-02 ಹುದ್ದೆಗಳು, ಆಯುರ್ವೇದ ಕ್ಷೇಮ ಕೇಂದ್ರ, ಹೊಸಕಡ್ಲೆಬಾಳು-02 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಸಂಬಂಧಪಟ್ಟ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಯುಷ್ ಕಚೇರಿ, ಪಂಚಾಯತ್ ರಾಜ್ ಕಾರ್ಯಪಾಲಕ ಇಂಜಿನಿಯರಿಂಗ್ ವಿಭಾಗೀಯ ಕಚೇರಿಯ ಆವರಣ, ಪಿ.ಬಿ.ರಸ್ತೆ, ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.