ದಾವಣಗೆರೆ: ಕರ್ನಾಟಕ ಯುವ ಕಾಂಗ್ರೆಸ್ ಸಮಿತಿಯ ನೂತನ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಹಾಗೂ ರಾಜ್ಯ ಉಪಾಧ್ಯಕ್ಷೆ ಭವ್ಯ ಕೆ.ಆರ್. ಅವರು ಇಂದು ದಾವಣಗೆರೆಗೆ ಆಗಮಿಸಲಿದ್ದಾರೆ.
ಇಂದು ಸಂಜೆ 4.00 ಗಂಟೆಗೆ ನಗರದ ಆಗಮಿಸಿ, ನಿಜಲಿಂಗಪ್ಪ ಬಡಾವಣೆಯ ಜಿಲ್ಲಾ ಕಾಂಗ್ರೆಸ್ ಪಕ್ಷದ ಸಮಿತಿ ಕಚೇರಿಯಲ್ಲಿ ಯುವ ಕಾಂಗ್ರೆಸ್ ಸಮಿತಿಯ ಸಭೆ ನಡೆಸುವರು. ಬಳಿಕ ಪಕ್ಷದ ಹಿರಿಯ ಮುಖಂಡ, ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜು ನಿವಾಸಕ್ಕೆ ಭೇಟಿ ನೀಡಲಿದ್ದಾರೆ.
ಸಭೆಗೆ ದಾವಣಗೆರೆ ಜಿಲ್ಲಾ ಭಾರತೀಯ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾ ಪದಾಧಿಕಾರಿಗಳು ಹಾಗೂ ವಿಧಾನಸಭಾ ಕ್ಷೇತ್ರದ ಬ್ಲಾಕ್ ವಿಭಾಗದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತಪ್ಪದೇ ಸಭೆಗೆ ಆಗಮಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ ಎಂದು ಎಂದು ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಾಗರ್ ಎಲ್. ಎಚ್ ಕೋರಿದ್ದಾರೆ.



