ದಾವಣಗೆರೆ: ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ; ಸರ್ಕಾರಿ ಶಾಲೆಯ ಮೇಘನ ಪ್ರಥಮ, ಗಾಯಿತ್ರಿ ದ್ವಿತೀಯ, ದ್ರಾಕ್ಷಯಣಿ ತೃತೀಯ ಸ್ಥಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ದಾವಣಗೆರೆ ಉತ್ತರ ವಲಯದ ಮೆಳ್ಳೆಕಟ್ಟೆ ಸರ್ಕಾರಿ ಪ್ರೌಢಶಾಲೆಯ ಮೇಘನ ಬಿ.ಟಿ ಪ್ರಥಮ ಸ್ಥಾನ, ಹರಿಹರ ತಾಲ್ಲೂಕಿನ ಹಾಲಿವಾಣ ಸರ್ಕಾರಿ ಪ್ರೌಢಶಾಲೆಯ ಗಾಯಿತ್ರಿ ಕೆ.ಎಂ ದ್ವಿತೀಯ ಸ್ಥಾನ ಹಾಗೂ ತೃತೀಯ ಸ್ಥಾನ ಪಡೆದ ಹೊನ್ನಾಳಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯ ದ್ರಾಕ್ಷಯಣಿ ಜಯಗಳಿಸಿದರು. ವಿದ್ಯಾರ್ಥಿಗಳಿಗೆ ನಗದು ಬಹುಮಾನ ‌ನೀಡಲಾಯಿತು.

ಯುವ ಸಂಸತ್ ಸ್ಪರ್ಧೆಯು ಮಕ್ಕಳಲ್ಲಿ ನಾಯಕತ್ವ ಗುಣವನ್ನು ಬೆಳೆಸುವುದರ ಜೊತೆಗೆ ಸರ್ಕಾರ ಮತ್ತು ಸಂಸದೀಯ ವ್ಯವಸ್ಥೆಯ ಬಗ್ಗೆ ಮನವರಿಕೆ ಮಾಡಿಕೊಡಲು ಸಹಕಾರಿಯಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ. ಕೊಟ್ರೇಶ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಸಚಿವಾಲಯ ಬೆಂಗಳೂರು ಇವರ ಸಹಯೋಗದೊಂದಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಫ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಹಾಗೂ ಅವರ ಆಲೋಚನೆಗಳನ್ನು ಮುಕ್ತವಾಗಿ ಚರ್ಚಿಸಲು ಯುವ ಸಂಸತ್ ಸ್ಪರ್ಧೆಯು ಉತ್ತಮ ವೇದಿಕೆಯಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳು ಹೇಗೆ ಕಾರ್ಯನಿರ್ವಹಿಸತ್ತವೆ ಎಂಬುದನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ ಯುವ ಸಂಸತ್ ಸ್ಪರ್ಧೆ ಸಹಕಾರಿಯಾಗಿದೆ. ಈ ಮಾದರಿ ಕಲಾಪದಲ್ಲಿ ಸಮಾಜದಲ್ಲಿನ ಸಮಸ್ಯೆಗಳನ್ನು ವ್ಯಕ್ತಪಡಿಸಬಹುದು ಎಂದರು.

ಯುವ ಸಂಸತ್ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಈ ಮಾದರಿ ಅಧಿವೇಶನದಲ್ಲಿ ಚರ್ಚೆಗಳು ಆರೋಗ್ಯಪೂರ್ಣವಾಗಿ ಹಾಗೂ ವಾದ-ವಿವಾದಗಳು ಸಾಮಾಜಿಕ ಬೆಳವಣಿಗೆಯ ಪರವಾಗಿರಬೇಕು. ಮಕ್ಕಳ ಮುಂದಿನ ಭವಿಷ್ಯಕ್ಕೆ ಈ ಸ್ಪರ್ಧೆಗಳು ದಾರಿದೀಪವಾಗಬೇಕು. ಜನ ಪ್ರತಿನಿಧಿಗಳನ್ನು ಸಿದ್ಧಗೊಳಿಸಲು ಯುವ ಸಂಸತ್ ಕಾರ್ಯಕ್ರಮ ಪ್ರೇರಣೆಯಾಗಬೇಕು.ಒಬ್ಬ ಯಜಮಾನ ತನ್ನ ಕುಟುಂಬವನ್ನು ಹೇಗೆ ನಿರ್ವಹಿಸುತ್ತಾನೋ ಹಾಗೆ ರಾಜ್ಯ ಹಾಗೂ ದೇಶವನ್ನು ಮುನ್ನಡೆಸಲು ಮುಖ್ಯಮಂತ್ರಿ, ಪ್ರಧಾನ ಮಂತ್ರಿ ಇರುತ್ತಾರೆ. ಅವರ ಕಾರ್ಯವೈಖರಿ ಗಮನಿಸಿ, ಸಲಹೆಗಳನ್ನು ನೀಡಲು, ತಪ್ಪುಗಳನ್ನು ತಿದ್ದಲು ವಿರೋಧ ಪಕ್ಷಗಳಿರುತ್ತವೆ ಎಂದು ಅವರು ಹೇಳಿದರು.

ವಿಷಯ ಪರಿವೀಕ್ಷಕರಾದ ಶಶಿಕಲಾ, ವಸಂತಕುಮಾರಿ, ತೀರ್ಪುಗಾರರಾದ ಮಂಜುನಾಥ್, ಪ್ರಭು ಕೆ.ಸಿ, ಕರಿಯಪ್ಪ ಜಿ.ಆರ್ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *