ದಾವಣಗೆರೆ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಕರ್ನಾಟಕ -ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಆಯೋಜನೆಯ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ ನೀಡಿ ಉದ್ಯೋಗವಕಾಶ ನೀಡಲಾಗುತ್ತಿದೆ.
ಈ ನಿಟ್ಟಿನಲ್ಲಿ ಇಲಾಖೆಯ ಅಧೀನದಲ್ಲಿ ಬರುವ ಸರ್ಕಾರಿ ತರಬೇತಿ ಸಂಸ್ಥೆಗಳಾದ ಐಟಿಐ ಜಿ.ಟಿ.ಟಿ.ಸಿ, ಕೆ.ಜಿ.ಟಿ.ಟಿ.ಐ ಹಾಗು ಸಿಡಾಕ್ ಸಂಸ್ಥೆಗಳ ಮೂಲಕ ಉಚಿತ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ಯುವನಿಧಿ ಯೋಜನೆಯ ಫಲಾನುಭವಿಗಳು ತರಬೇತಿಗಾಗಿ kaushalkar portal ಅಲ್ಲಿ Registration ಮಾಡಿಕೊಳ್ಳಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಡಾ.ಸಿದ್ದೇಶ್.ಎಸ್ ತಿಳಿಸಿದ್ದಾರೆ.



