ದಾವಣಗೆರೆ: ಜಿ.ಪಂ, ತಾ. ಪಂ ಚುನಾವಣೆ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದೊಂದಿಗೆ ಮೀಸಲಾತಿ ಸಂಬಂಧ ಚರ್ಚೆ ನಡೆದಿದೆ, ಮೊದಲ ಹಂತದಲ್ಲಿ ಬಿಬಿಎಂಪಿ ಚುನಾವಣೆಗಳನ್ನ ನಡೆಸಲಾಗುವುದು. ನಂತರ ಹಿಂದುಳಿದ ವರ್ಗಗಳ ಆಯೋಗದ ವರದಿಯಂತೆ ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಮೇಕೆದಾಟು ಯೋಜನೆ ಕುರಿತು ಸುಪ್ರೀಂಕೋರ್ಟ್ ನಲ್ಲಿ ಯಾವುದೇ ತಡೆಯಾಜ್ಞೆ ಇಲ್ಲ, ಸಿಡ್ಲೂಎಮ್‍ಎ ಸಮಿತಿಗೆ ಸಂಪೂರ್ಣ ಪರಮಾಧಿಕಾರ ಇದೆ. ಮುಂದಿನ ವಾರ ಸಿಡ್ಲೂಎಮ್‍ಎ ಸಮಿತಿ ಸಭೆ ನಡೆಯುವ ಸಾಧ್ಯತೆ ಇದ್ದು ಈಗಾಗಲೇ ನಮ್ಮ ವಾದವನ್ನು ಮಂಡಿಸಿದ್ದೇವೆ. ತಮಿಳುನಾಡು ಏನೇ ಆಕ್ಷೇಪಣೆ ಎತ್ತಿದರೂ ಡಿ.ಪಿ.ಆರ್ ಅನುಮೋದನೆಯಾಗುವ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ನಗರಾಭಿವದ್ಧಿ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಬಸವರಾಜ್, ಸಂಸದರಾದ ಡಾ.ಜಿ.ಎಂ. ಸಿದ್ದೇಶ್ವರ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ. ರವೀಂದ್ರನಾಥ್, ಮಾಯಕೊಂಡ ಕ್ಷೇತ್ರದ ಶಾಸಕ ಪ್ರೊ.ಲಿಂಗಣ್ಣ, ಮಹಾ ನಗರಪಾಲಿಕೆಯ ಮೇಯರ್ ಜಯಮ್ಮ ಗೋಪಿನಾಯ್ಕ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಸಿಇಓ ಡಾ.ಚನ್ನಪ್ಪ ಉಪಸ್ಥಿತರಿದ್ದರು.



