Advertisement

ದಾವಣಗೆರೆ; ಓಮಿನಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 12 ಕ್ವಿಂಟಲ್ ಪಡಿತರ ಅಕ್ಕಿ ವಶ

ದಾವಣಗೆರೆ: ಸರ್ಕಾರ ಬಡವರಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 18 ಸಾವಿರ ಮೌಲ್ಯದ 12 ಕ್ವಿಂಟಾಲ್ ಪಡಿತರ ಅಕ್ಕಿ ಮತ್ತು ಸಾಗಾಟ ಮಾಡಲು ಬಳಸಿದ ಎರಡು ಓಮಿನಿ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಸವಾಪಟ್ಟಣ ಗ್ರಾಮದ ಕಡೆಯಿಂದ ಹೊನ್ನಾಳಿ ಟೌನ್ ಕಡೆಗೆ ಎರಡು ಓಮಿನಿ ವಾಹನಗಳಲ್ಲಿ ಸರ್ಕಾರ ಬಡವರಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾರೆ ಅಂತ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ದೇವರಾಜ್, ಸಿಪಿಐ, ಹೊನ್ನಾಳಿ ವೃತ್ತ ಮಾರ್ಗದರ್ಶನದಲ್ಲಿ ಬಸವರಾಜ ಬಿರಾದರ ಪಿ.ಎಸ್.ಐ ಹೊನ್ನಾಳಿ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಯವರು ಹಾಗು ಮಂಜುನಾಥ ಹೆಚ್.ಸಿ, ಆಹಾರ ನಿರೀಕ್ಷಕರು, ತಾಲ್ಲೂಕು ಕಛೇರಿ ಹೊನ್ನಾಳಿ ರವರು ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗೊಲ್ಲರಹಳ್ಳಿ ಗ್ರಾಮದ ಬಳಿ ಬಸವಾಪಟ್ಟಣ ಕ್ರಾಸ್ ಹತ್ತಿರ ಸರ್ಕಾರ ಬಡವರಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಲಾಭ ಪಡೆಯುವ ಉದ್ದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

 

Dvgsuddi: Dvgsuddi.com is a live Kannada news portal. Kannada news online. political, information, crime, film, Sports News in Kannada
Related Post
Recent Posts