ದಾವಣಗೆರೆ: ಹೊನ್ನಾಳಿ ತಾಲ್ಲೂಕು ಸಾಸಿವೇಹಳ್ಳಿ ಹೋಬಳಿ ತ್ಯಾಗದಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಇಂದು ಭೇಟಿ ನೀಡಿದ್ದರು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಶಾಲೆಯ ಕೊಠಡಿಯನ್ನು ಪರಿಶೀಲನೆ ಮಾಡಿದರು. ಇದೇ ವೇಳೆ ಶಾಲೆಯ ಅಡುಗೆ ಕೋಣೆ ಪರಿಶೀಲಿಸಿ ಮಕ್ಕಳೊಂದಿಗೆ ಮಧ್ಯಾಹ್ನದ ಊಟ ಸೇವಿಸಿದರು.



