ದಾವಣಗೆರೆ: 2022-23ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಇಲಾಖೆಯ ವೆಬ್‍ಸೈಟ್ www.bcwd.karnataka.gov.in ನಲ್ಲಿ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ವೆಬ್ ಸೈಟ್ www.bcwd.karnataka.gov.in ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆ: 080-8050370006 ಅಥವಾ bcwd.hostels@karnataka.gov.in ಇ-ಮೇಲ್ ಮುಖಾಂತರ ಸಂಪರ್ಕಿಸಬಹುದೆಂದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



