ಡಿವಿಜಿ ಸುದ್ದಿ, ಬೆಂಗಳೂರು: ಡಿಸಿಎಂ ಅಶ್ವತ್ಥನಾರಾಯಣ ಅವರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇಂದ ಸ್ವತಃ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.
ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದು ಹೇಳಿದ್ದಾರೆ.
ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.
1/2
— Dr. C.N. Ashwath Narayan (@drashwathcn) September 19, 2020
ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.



