Connect with us

Dvgsuddi Kannada | online news portal | Kannada news online

ಗ್ರಾಮ ಪಂಚಾಯ್ತಿಗಳಿಗೆ ಪ್ರತಿ ವರ್ಷ1.5 ಕೋಟಿ ಅನುದಾನ: ಡಿಸಿಎಂ ಅಶ್ವತ್ಥ ನಾರಾಯಣ

ಪ್ರಮುಖ ಸುದ್ದಿ

ಗ್ರಾಮ ಪಂಚಾಯ್ತಿಗಳಿಗೆ ಪ್ರತಿ ವರ್ಷ1.5 ಕೋಟಿ ಅನುದಾನ: ಡಿಸಿಎಂ ಅಶ್ವತ್ಥ ನಾರಾಯಣ

ರಾಮನಗರಆಡಳಿತ ವಿಕೇಂದ್ರೀಕರವನ್ನು ಉತ್ತಮವಾಗಿ ಅನುಷ್ಠಾನಗೊಳಿಸಲು ಪ್ರತಿ ಗ್ರಾಮ ಪಂಚಾಯಿತಿಗಳಿಗೆ ವರ್ಷಕ್ಕೆ 1.5 ಕೋಟಿ ರೂ. ಅನುದಾನವನ್ನು ನೇರವಾಗಿ ಬಿಡುಗಡೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 15ನೇ ಹಣಕಾಸು ಆಯೋಗದ ವರದಿಯಲ್ಲಿ ನೇರವಾಗಿ ಗ್ರಾಮ ಪಂಚಾಯಿತಿಗಳಿಗೇ ಹೆಚ್ಚು ಅನುದಾನ ನೀಡುವ ಅಂಶಗಳಿವೆ. ಹೀಗಾಗಿ  ಗ್ರಾಮೀಣಾಭಿವೃದ್ಧಿಗೆ ಬೇಕಾದ ಎಲ್ಲ ಹಣಕಾಸು ಒದಗಿಸಲಾಗುವುದು. ಜತೆಗೆ, ಆಯಾ ಗ್ರಾಮಗಳ ನರೇಗಾ ಯೋಜನೆಗಳ ಅನುಷ್ಠಾನದ ಹೊಣೆಯನ್ನು ಜಿಲ್ಲಾ ಪಂಚಾಯಿತಿಯಿಂದ ಗ್ರಾಮ ಪಂಚಾಯಿತಿಗಳಿಗೆ ವಹಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ನಮ್ಮ ಪಕ್ಷದ ಗ್ರಾಮ ಸ್ವರಾಜ್ಯ ಪರಿಕಲ್ಪನೆಯಂತೆ ಆದರ್ಶ ಗ್ರಾಮಗಳನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಆರೋಗ್ಯ, ಮೂಲಸೌಕರ್ಯ, ಶಿಕ್ಷಣ, ರಸ್ತೆ, ಕೆರೆಕುಂಟೆ ಸೇರಿದಂತೆ ಎಲ್ಲ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗುವುದು. ಕೇವಲ ಆರು ವರ್ಷಗಳ ಹಿಂದೆ ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯ ವ್ಯವಸ್ಥೆ ಶೇ.30ರಷ್ಟು ಮಾತ್ರ ಇತ್ತು. ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಶೌಚಾಲಯ ಕಟ್ಟುವುದೂ ಅಸಾಧ್ಯ ಎನ್ನುವಂಥ ಸ್ಥಿತಿ ಇತ್ತು. ಪ್ರಧಾನಿ ಮೋದಿ ಅವರ ಸ್ವಚ್ಛ ಭಾರತ್‌ ಅಭಿಯಾನದಿಂದ ಇವತ್ತು ಗ್ರಾಮದ ಪ್ರತಿ ಮನೆಯಲ್ಲೂ ಶೌಚಾಲಯಗಳನ್ನು ಕಾಣಬಹುದು. ಸ್ವಚ್ಛತೆ ಎನ್ನುವುದು ಜನಜೀವನದ ಅವಿಭಾಜ್ಯ ಅಂಗವಾಗಿದೆ ಎಂಬುದನ್ನು ಎಲ್ಲೆಲ್ಲೂ ಕಾಣಬಹುದು ಎಂದರು.

ಗರೀಬಿ ಹಠಾವೋ ಸೇರಿದಂತೆ ಯಾವುದೇ ಘೋಷಣೆಗಳ ಮೂಲಕ ಗ್ರಾಮಗಳಲ್ಲಿ ಬಡತನ ನಿರ್ಮೂಲನೆ ಆಗಲಿಲ್ಲ. ಎಪ್ಪತ್ತು ವರ್ಷಗಳಾದರೂ ಬಡತನ ಜೀವಂತವಾಗಿದೆ. ಮಾತಿನ ಬದಲಿಗೆ ರಚನಾತ್ಮಕವಾಗಿ ಕೆಲಸ ಮಾಡಿದರೆ ಗ್ರಾಮಗಳು ಉದ್ಧಾರವಾಗುತ್ತವೆ. ಕಾಂಗ್ರೆಸ್‌ ಬರೀ ಘೋಷಣೆಗಳನ್ನು ಮಾಡುತ್ತಾ ಬಂದಿತ್ತು. ಬಿಜೆಪಿ ಹಾಗೆ ಮಾಡುತ್ತಿಲ್ಲ. ಸಮಸ್ಯೆಯನ್ನು ಶಾಶ್ವತವಾಗಿ ಪರಿಹಾರ ಮಾಡಲು ಯತ್ನಿಸುತ್ತಿದೆ. ಘೋಷಣೆ ಬದಲು ಕೆಲಸ ಮಾಡುತ್ತಿದೆ. ಪರಿಣಾಮವಾಗಿ ಭಾರತ ಬದಲಾಗುತ್ತಿದೆ ಎಂದು ಹೇಳಿದರು.

ಈಗ ಪಂಚಾಯಿತಿ ಚುನಾವಣೆ ಬಂದಿದೆ. ನಮ್ಮ ಹಳ್ಳಿಗೆ ನಮ್ಮದೇ ಆಡಳಿತವನ್ನು ಆಯ್ಕೆ ಮಾಡಿಕೊಳ್ಳುವಂಥ ಚುನಾವಣೆ ಇದು. ಇಷ್ಟು ದಿನ ಒಬ್ಬರ ಹೆಸರಿನಲ್ಲಿ ಇನ್ನೊಬ್ಬರು, ಮತ್ತೊಬ್ಬರ ಹೆಸರಿನಲ್ಲಿ ಮಗದೊಬ್ಬರು ಆಡಳಿತ ನಡೆಸಿದ್ದು ಸಾಕು. ಇಡೀ ದೇಶದಲ್ಲಿ ಸಮಸ್ತ ಭಾರತೀಯರ ಏಕೈಕ ರಾಜಕೀಯ ಆಯ್ಕೆ ಎಂದರೆ, ಅದು ಬಿಜೆಪಿ ಮಾತ್ರ. ಹೀಗಾಗಿ ಬಿಜೆಪಿ ಅಭ್ಯರ್ಥಿಗಳನ್ನು ಜನರು ಗೆಲ್ಲಿಸಬೇಕು. ಆ ಮೂಲಕ ಗ್ರಾಮ ಗ್ರಾಮದಲ್ಲಿಯೂ ಸ್ವರಾಜ್ಯ ಬರಬೇಕು. ಈ ಮೂಲಕ ನಮ್ಮ ಪ್ರಜಾಪ್ರಭುತ್ವಕ್ಕೆ ಇನ್ನಷ್ಟು ಬಲ ತಂಬಬೇಕು ಎಂದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});