ಡಿವಿಜಿ ಸುದ್ದಿ, ದಾವಣಗೆರೆ: ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರುವ ವಿದ್ಯಾರ್ಥಿಗಳಿಗೆ ಹರಪನಹಳ್ಳಿ ಸರ್ಕಾರಿ ಪಾಲಿಟೆಕ್ನಿಕ್ ಎಲ್ಲಾ ವಿಭಾಗಗಳಲ್ಲಿ ಖಾಲಿ ಉಳಿದಿರುವ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ನೇರ ಪ್ರವೇಶದ ಮೂಲಕ ದಾಖಲಾತಿ ಮಾಡಿಕೊಳ್ಳಲಾಗುವುದು.ವಿದ್ಯಾರ್ಥಿಗಳು ನ.14 ರೊಳಗೆ ಮೂಲದಾಖಲಾತಿಗಳೊಂದಿಗೆ ಹಾಜರಾಗಿ ಪ್ರವೇಶ ಪಡೆದುಕೊಳ್ಳಬಹುದು. ದ್ವಿತೀಯ ಪಿಯುಸಿ (ವಿಜ್ಞಾನ/ಐಟಿಐ(ತಾಂತ್ರಿಕ ವಿಷಯಗಳು) ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೂ ಸಹ ಲ್ಯಾಟರಲ್ ಎಂಟ್ರಿ ಸ್ಕೀಮ್ ಮುಖಾಂತರ ನೇರವಾಗಿ 2ನೇ ವರ್ಷದ ಡಿಪ್ಲೊಮಾಕ್ಕೆ ಆಫ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಪ್ರವೇಶ ನೀಡಬಹುದು.ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9844197172, 9902482350, 8880932400 ನ್ನು ಸಂಪರ್ಕಿಸಬಹುದೆಂದು ಸಂಸ್ಥೆಯ ಪ್ರಾಚಾರ್ಯರಾದ ಎಂ.ಎಸ್.ದೇವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.