ಡಿವಿಜಿ ಸುದ್ದಿ, ದಾವಣಗೆರೆ: ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅ. 5 ರೊಳಗೆ ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಬದಲಿ ನೌಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯ್ತಿ ಸಿಇಓ ಪದ್ಮಾ ಬಸವಂತಪ್ಪ ಎಚ್ಚರಿಕೆ ನೀಡಿದ್ದಾರೆ.
ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸೆ.24 ರಿಂದ ಮುಷ್ಕರದಲ್ಲಿ ನಿರತರಾಗಿದ್ದು, ಜಿಲ್ಲೆಯಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ನೀಡುವಲ್ಲಿ ಅಡಚಣೆವುಂಟಾಗಿರುತ್ತದೆ. ಈ ಸಂಬಂಧ ಅ.3 ರಂದು ನಡೆದ ಸಭೆಯಲ್ಲಿ ದೀರ್ಘವಾಗಿ ಚರ್ಚಿಸಲಾಗಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇವೆ ನೀಡುವಲ್ಲಿ ಅಸಡ್ಡೆತನ ತೋರಿರುವು ಕಂಡು ಬಂದಿರುತ್ತದೆ.
ಈ ಹಿನ್ನೆಲೆಯಲ್ಲಿ ಅ. 5 ರಂದು ತಮ್ಮ ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ತಮ್ಮ ಸೇವೆಯನ್ನು ವಜಾಗೊಳಿಸಿ ಬದಲಿ ನೌಕರರನ್ನು ನಿಯೋಜಿಸಲು ಕ್ರಮ ವಹಿಸಲಾಗುವುದು ಎಂದು ಜಿ.ಪಂ ಸಿ.ಇ.ಓ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕು.ಕ ಸಂಘದ ಅಧ್ಯಕ್ಷರಾದ ಪದ್ಮಾ ಬಸವಂತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.